ಬದಿಯಡ್ಕ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನೀರ್ಚಾಲು ಘಟಕ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಕಾಸರಗೋಡು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಅಬ್ಕೋ ಸ್ಟೀಲ್ ಇಂಟರ್‍ನೇಷನಲ್ ಪ್ರೈವೆಟ್ ಲಿಮಿಟೆಡ್ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಸೆ.12 ರಂದು ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 1ರ ತನಕ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಲಿರುವುದು. ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ಉಚಿತವಾಗಿರುತ್ತದೆ. ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕಾಸರಗೋಡು ಪ್ರಸಾದ್ ನೇತ್ರಾಲಯದಲ್ಲಿ ಮಾಡಲಾಗುವುದು. ಸಾರ್ವಜನಿಕರು ಈ ವ್ಯವಸ್ಥೆಯ ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಬಂಧಪಟ್ಟವರು ವಿನಂತಿಸಿಕೊಂಡಿದ್ದಾರೆ.

