HEALTH TIPS

"140 ಕೋಟಿ ಭಾರತೀಯರು ಮೊದಲು": ರಷ್ಯನ್ ತೈಲ ಕುರಿತು ಅಮೆರಿಕದ ಶೇ.100 ಸುಂಕ ಬೆದರಿಕೆಗೆ ಭಾರತದ ಪ್ರತಿಕ್ರಿಯೆ

ನವದೆಹಲಿರಷ್ಯಾ ಮೇಲೆ ನಿರ್ಬಂಧಗಳ ಮಸೂದೆಯನ್ನು ಅಮೆರಿಕವು ಅಂಗೀಕರಿಸಿರುವ ಹಿನ್ನೆಲೆಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು (ಎಂಇಎ) ತಾನು ದೇಶದ ಇಂಧನ ಭದ್ರತೆಗೆ ಬದ್ಧವಾಗಿರುವುದಾಗಿ ಸ್ಪಷ್ಟಪಡಿಸಿದೆ. ಭಾರತವು ತನ್ನ 140 ಕೋಟಿ ಜನಸಂಖ್ಯೆಗೆ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಸಚಿವಾಲಯವು ತಿಳಿಸಿದೆ. 


ಬುಧವಾರ ಅಮೆರಿಕದ ಸಂಸತ್ತು 'ಲಿಂಡ್ಸೆ ಒ. ಗ್ರಹಾಂ ರಷ್ಯಾ ಮತ್ತು ಇರಾನ್ ಮೇಲಿನ ನಿರ್ಬಂಧ ಕಾಯ್ದೆ-2026' ಅನ್ನು ಅಂಗೀಕರಿಸಿದೆ. ರಷ್ಯಾದಿಂದ ತೈಲ ಖರೀದಿಸುವ ಭಾರತ ಹಾಗೂ ಚೀನಾದಂತಹ ದೇಶಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಈ ಮಸೂದೆಯು ಅಮೆರಿಕ ಅಧ್ಯಕ್ಷರಿಗೆ ಅಧಿಕಾರ ನೀಡುತ್ತದೆ.

ಈ ಹಿಂದೆ ಹಲವಾರು ಸಂದರ್ಭಗಳಲ್ಲಿ ಹೇಳಿರುವಂತೆ ಭಾರತವು ತನ್ನ 1.4 ಬಿಲಿಯನ್ ಜನರಿಗೆ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ. ವಿವಿಧ ಮೂಲಗಳಿಂದ ಇಂಧನವನ್ನು ಪಡೆದುಕೊಳ್ಳುವ ಮೂಲಕ ಮತ್ತು ಮಾರುಕಟ್ಟೆಯಲ್ಲಿನ ಬದಲಾವಣೆಗಳ ಆಧಾರದ ಮೇಲೆ ಇದು ಮುಂದುವರಿಯುತ್ತದೆ. ಇತ್ತೀಚಿನ ತಿಂಗಳುಗಳಲ್ಲಿ ಈ ವಿಷಯದ ಕುರಿತು ಅಮೆರಿಕದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದಲ್ಲಿ ಚರ್ಚಿಸಲಾಗಿದೆ ಮತ್ತು ದ್ವಿಪಕ್ಷೀಯ ಸಂಬಂಧ ಹಾಗೂ ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಯ ಮೇಲಾಗುವ ಪರಿಣಾಮಗಳನ್ನು ಸ್ಪಷ್ಟಪಡಿಸಲಾಗಿದೆ ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ತನ್ನ ವ್ಯಾಪಾರ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದಾಗಿಯೂ ಭಾರತವು ಸ್ಪಷ್ಟಪಡಿಸಿದೆ. ಈ ಬೆಳವಣಿಗೆಗಳ ಪರಿಣಾಮಗಳನ್ನು ಎದುರಿಸಲು ಸರಕಾರವು ಭಾರತೀಯ ವ್ಯಾಪಾರ ಮತ್ತು ಕೈಗಾರಿಕಾ ಸಂಸ್ಥೆಗಳೊಂದಿಗೆ ನಿಕಟವಾಗಿ ಕಾರ್ಯ ನಿರ್ವಹಿಸಲಿದ್ದು, ಮುಂದಿನ ಬೆಳವಣಿಗೆಗಳ ಮೇಲೆ ನಿಗಾಯಿಡಲಾಗಿದೆ ಎಂದೂ ಅದು ತಿಳಿಸಿದೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries