HEALTH TIPS

ನೇಪಾಳ ಪ್ರವಾಹ: ಮೃತರ ಸಂಖ್ಯೆ 1,451ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 1,451ಕ್ಕೆ ಏರಿಕೆಯಾಗಿದೆ. ಇನ್ನೂ 6,000 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.


ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಪ್ರವಾಹ ಪೀಡಿತರು ಸಾವಿಗೀಡಾಗಿದ್ದಾರೆ. ಈವರೆಗೆ ದೇಶದಲ್ಲಿ 13,784 ಮಂದಿ ಬಾಧಿತರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಶವಗಳು ಪತ್ತೆಯಾಗುತ್ತಿವೆ. ಮೃತದೇಹಗಳನ್ನು ಗುರುತಿಸುವುದು ಸವಾಲಾಗಿದೆ. ಈವರೆಗೆ ಗುರುತು ಪತ್ತೆಯಾದ 110 ಶವಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಡಿಎನ್‌ಎ ಮಾದರಿ ಸಂಗ್ರಹಿಸಿ, 1,300 ಮೃತದೇಹಗಳ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಅದು ಮಾಹಿತಿ ನೀಡಿದೆ.

ಚೀನಾಕ್ಕೆ ಸೇರಿದ ಪ್ರದೇಶದಲ್ಲೂ ಪ್ರವಾಹ ಕಾಣಿಸಿಕೊಂಡು 43 ಜನ ಮೃತಪಟ್ಟಿದ್ದಾರೆ ಹಾಗೂ 500 ಮಂದಿ ಕಾಣೆಯಾಗಿದ್ದಾರೆ ಎಂದು ಚೀನಾದ ಮಾಧ್ಯಮ ವರದಿ ಮಾಡಿದೆ.

ಆಗಸ್ಟ್‌ 26ರಂದು ಸಂಭವಿಸಿದ ಹಠಾತ್‌ ಪ್ರವಾಹದಿಂದ ನೇಪಾಳವು ತತ್ತರಿಸಿದ್ದು, ಮೂಲಸೌಕರ್ಯಕ್ಕೆ ಭಾರಿ ಹಾನಿಯುಂಟಾಗಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries