ಮಂಜೇಶ್ವರ: ಮೀಯಪದವು ಮಾಸ್ಟರ್ಸ್ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್ ನ 15ನೇ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಹಾಗೂ ಶ್ರೀಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮ ಮೀಯಪದವು ಶಾಲಾ ಮೈದಾನದಲ್ಲಿ ಶುಕ್ರವಾರ ಜರಗಿತು. ಕ್ಲಬ್ ನ ಗೌರವಾಧ್ಯಕ್ಷ ಪುಷ್ಪರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದ ಸಮಾರಂಭವನ್ನು ಪೈವಳಿಕೆ ನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಶ್ರೀಕಾಂತ್ ರಾವ್ ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು. ಕ್ಲಬ್ ನ ಅಧ್ಯಕ್ಷ ರವಿಶಂಕರ್ ರಾವ್ ಹಾಗೂ ಪ್ರಧಾನ ಕಾರ್ಯದರ್ಶಿ ಮನೋಜ್ ರೈ ಉಪಸ್ಥಿತರಿದ್ದರು. ಬಳಿಕ ವಿವಿಧ ಆಟೋಟ ಸ್ಫರ್ಧೆಗಳು, ಸಾಂಸ್ಕøತಿಕ ಸ್ಪರ್ಧೆಗಳು ಹಾಗೂ ಶ್ರೀಕೃಷ್ಣ ವೇಷ ಸ್ಪರ್ಧೆ ಹಾಗೂ ಶ್ರೀಕೃಷ್ಣ ವೇಷ ನೃತ್ಯ ಸ್ಪರ್ಧೆಗಳು ಜರಗಿದವು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತಿ ಮಾಜಿ ಸದಸ್ಯ ಕೆ.ವಿ ರಾಧಾಕೃಷ್ಣ ಭಟ್ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ವಿ ವಿ ಎಸ್ ಎಸ್ ಶಾಲೆಯ ಸಂಚಾಲಕ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ವಿ ಎ ಯು ಪಿ ಶಾಲೆಯ ಮುಖ್ಯ ಶಿಕ್ಷಕ ಅರವಿಂದಾಕ್ಷ ಭಂಡಾರಿ ಹಾಗೂ ಎಸ್ ವಿ ವಿ ಎಸ್ ಎಸ್ ಶಾಲೆಯ ಮುಖ್ಯ ಶಿಕ್ಷಕಿ ಮೃದುಲಾ ಕೆ.ಎಂ. ಶುಭ ಹಾರೈಸಿದರು. ಕ್ಲಬ್ ನ ಗೌರವ ಸಲಹೆಗಾರ ಜನಾರ್ಧನ ಎಸ್ ಉಪಸ್ಥಿತರಿದ್ದರು. ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ರಘುವೀರ್ ರಾವ್ ನಡೆಸಿಕೊಟ್ಟರು. ಅಧ್ಯಾಪಕ ಬ್ರಿಜೇಶ್ ಎಂ ಪ್ರಾರ್ಥನೆ ಹಾಡಿದರು. ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿ, ರವಿಶಂಕರ್ ರಾವ್ ವಂದಿಸಿದರು. ಕಿರಣ್ ಕುಮಾರ್ ಚಂಡಿತೋಟ ಕಾರ್ಯಕ್ರಮ ನಿರೂಪಿಸಿದರು.

.jpg)
.jpg)
