ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಎಂಡಿಎಂಎ ವಶಪಡಿಸಿಕೊಂಡಿರುವ ಮೇಲ್ಪರಂಬ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೋಳಿಯಡ್ಕ ನಿವಾಸಿ ಎ.ಎಂ. ಇರ್ಷಾದ್ (35) ಬಂಧಿತ.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯ ನೇತೃತ್ವದ 'ಡಾನ್ಸಾಫ್'ತಂಡ ಕೋಳಿಯಡ್ಕ ಕುಳಿಕುನ್ನಿನಲ್ಲಿ ವಾಹನ ತಪಾಸಣೆಯಲ್ಲಿ ತೊಡಗಿದ್ದ ವೇಳೆ ಈ ಹಾದಿಯಾಗಿ ಬಂದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆಗೊಳಪಡಿಸಿದಾಗ 1.68 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.

