HEALTH TIPS

ಕಾಸರಗೋಡು ದಸರಾ ಸಾಂಸ್ಕøತಿಕೋತ್ಸವ-ಅ.18 ರಂದು ದಸರಾ ಕವಿಗೋಷ್ಠಿ

ಕಾಸರಗೋಡು: 'ದಸರಾ ಸಾಂಸ್ಕೃತಿಕೋತ್ಸವ-2026ರ'ಅಂಗವಾಗಿ ದಸರಾ ಕವಿಗೋಷ್ಠಿ ಅಕ್ಟೋಬರ್ 18ರಂದು ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿದೆ. 

ಡಾ. ವಾಮನ್ ರಾವ್ ಬೇಕಲ್-ಸಂಧ್ಯಾ ರಾಣಿ ಸಾರಥ್ಯದ ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಪ್ರಾಯೋಜಕತ್ವ  ಹಾಗೂ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. 

ಹತ್ತು ದಿವಸಗಳ ಕಾಲ ನಡೆಯಲಿರುವ ದಸರಾ ಸಾಂಸ್ಕೃತಿಕೋತ್ಸವದ ಅಂಗವಾಗಿ ಕವಿಗೋಷ್ಠಿ ಆಯೋಜಿಸಲಾಗಿದೆ. ಕವಿಗೋಷ್ಠಿಯಲ್ಲಿ ಮೊದಲು ಹೆಸರು ನೋಂದಾಯಿಸುವ 51 ಮಂದಿ ಕವಿಗಳಿಗೆ ಅವಕಾಶ ನೀಡಲಾಗುವುದು.

ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಭಕ್ತಿ ಪ್ರಧಾನ ಹಾಗೂ ಸ್ವಯಂ ರಚಿತ ಕವಿತೆಗಳನ್ನೇ ವಾಚಿಸಬೇಕು. ವಾಚಿಸಲಿರುವ ಕವಿತೆಯ ಒಂದು ಪ್ರತಿಯನ್ನು ಆಯೋಜಕರಿಗೆ ಸಲ್ಲಿಸಬೇಕು. ಕವಿಗೋಷ್ಠಿಯಲ್ಲಿ ವಾಚಿಸಲಾದ ಕವಿತೆಗಳನ್ನು ಒಳಗೊಂಡ ಪುಸ್ತಕವನ್ನು ಕನ್ನಡ ಭವನ ಪ್ರಕಾಶನದ ವತಿಯಿಂದ ಮುದ್ರಿಸಿ ಪ್ರಕಟಿಸಲಾಗುವುದು.

ಕವಿಗೋಷ್ಠಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಕವಿಯನ್ನು ಕಾಸರಗೋಡು ದಸರಾ ಸಾಧಕ ಸನ್ಮಾನ, ಅಭಿನಂದನಾ ಗೌರವ ಪತ್ರ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಲಾಗುವುದು.

ಆಸಕ್ತ ಕವಿಗಳು 9037173400 ಅಥವಾ 9746093552 ಸಂಖ್ಯೆಗೆ ವಾಟ್ಸಪ್ ಮೂಲಕ ತಮ್ಮ ಹೆಸರು ಹಾಗೂ ಭಾವಚಿತ್ರವನ್ನು ಕಳುಹಿಸಿ, ಬಳಿಕ ದೂರವಾಣಿ ಮೂಲಕ ನೋಂದಣಿ ಖಚಿತಪಡಿಸಿಕೊಳ್ಳುವಂತೆ 'ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ-2026' ಸಮಿತಿ ಸಂಚಾಲಕ ಡಾ. ವಾಮನ್ ರಾವ್ ಬೇಕಲ್ ಹಾಗೂ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries