HEALTH TIPS

ಮಾದಕವಸ್ತುಗಳ ವಿರುದ್ಧ ಹೋರಾಟ-ಮಂಜೇಶ್ವರ ಬ್ಲಾಕ್ ಪಂಚಾಯಿತಿಯಲ್ಲಿ ತೂಫಾನ್2.0 ಜಾಗೃತಿ ಕಾರ್ಯಕ್ರಮ

ಮಂಜೇಶ್ವರ: ಮಾದಕವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಂಜೇಶ್ವರ ಬ್ಲಾಕ್ ಪಂಚಾಯಿತಿಯಲ್ಲಿ ಸೋಮವಾರ ಜರುಗಿತು. ಮಾದಕವಸ್ತುಗಳ ವ್ಯಾಪಕ ಬಳಕೆ ಮತ್ತು ವಿತರಣೆಯನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸುತ್ತಿರುವ ತೂಫಾನ್ ಯೋಜನೆಯ ಎರಡನೇ ಹಂತವಾದ ತೂಫಾನ್ 2.0 ಅನ್ನು ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 


ಮಂಜೇಶ್ವರ ಬ್ಲಾಕ್ ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಬ್ಲಾಕ್ ಪಂಚಾಯತ್ ಅಧ್ಯಕ್ಷರಾದ ಯು.ಕೆ. ಸೈಫುಲ್ಲಾ ತಙಳ್ ಸಮಾರಂಭ ಉದ್ಘಾಟಿಸಿದರು.

ಕಾರ್ಯಕ್ರಮದ ಅಂಗವಾಗಿ ರಾಜ್ಯಮಟ್ಟದ ತೂಫಾನ್ 2.0 ಉದ್ಘಾಟನಾ ಕಾರ್ಯಕ್ರಮದ ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ಹಾಗೂ ಮಾದಕವಸ್ತು ವಿರೋಧಿ ಜಾಗೃತಿ ತರಗತಿ ಆಯೋಜಿಸಲಾಯಿತು.

ಪೆÇಲೀಸ್ ಇಲಾಖೆಯ ಪ್ರತಿನಿಧಿಯಾಗಿ ಭಾಗವಹಿಸಿದ್ದ ಮಂಜೇಶ್ವರ ಠಾಣೆ ಸಬ್ ಇನ್ಸ್‍ಪೆಕ್ಟರ್ ಶಬರಿಕೃಷ್ಣನ್ ಅವರು ಬ್ಲಾಕ್ ಪಂಚಾಯತ್ ಸದಸ್ಯರಿಗೆ 'ತೂಫಾನ್ ವಾರಿಯರ್' ಬ್ಯಾಡ್ಜ್ ವಿತರಿಸಿದರು. ಬ್ಲಾಕ್ ಪಂಚಾಯಿತಿಯ  ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಕಣ್ಣೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಲೀಗಲ್ ಸ್ಟಡೀಸ್‍ನ ಮಂಜೇಶ್ವರ ಕ್ಯಾಂಪಸ್‍ನ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಈ ಸಂದರ್ಭ ಮಾದಕವಸ್ತು ವಿರೋಧಿ ಪ್ರತಿಜ್ಞೆ ಸ್ವೀಕರಿಸಲಾಯಿತು.

ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಕಲಾಮಾಕ್ಷಿ ಅಧ್ಯಕ್ಷತೆ ವಹಿಸಿದ್ದರು.  ವಿವಿಧ ಸ್ಥಾಯೀ ಸಮಿತಿ ಅಧ್ಯಕ್ಷರಾದ ಮೋಹನ್ ರೈ, ಮೊಹಮ್ಮದ್ ಹನೀಫ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ತೂಫಾನ್-2.0ರಾಜ್ಯಮಟ್ಟದ ಕಾರ್ಯಕ್ರಮವನ್ನು ರಾಜ್ಯ ಗೃಹಸಚಿವ ರಮೇಶ್ ಚೆನ್ನಿತ್ತಲ ಅವರು ವೆಙËರದಲ್ಲಿ ಉದ್ಘಾಟಿಸಿದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries