HEALTH TIPS

ರಾಮ ಮಂದಿರ ದೇಣಿಗೆ ಕಳವು | ಇದೇ 25ರ ಒಳಗೆ ದೋಷಾರೋಪ ಪಟ್ಟಿ ಸಲ್ಲಿಕೆ: ಸುಪ್ರೀಂ

ನವದೆಹಲಿ: ರಾಮಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ಕಳವು ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ, ನ್ಯಾಯಾಲಯ ನೇಮಿಸಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಇದೇ 25ರ ಒಳಗಾಗಿ ಮೊದಲ ದೋಷಾರೋಪಪಟ್ಟಿಯನ್ನು ಸಲ್ಲಿಸಲಿದೆ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. 


'ಪ್ರಕರಣದಲ್ಲಿ ಮೊದಲ ಬಂಧನವಾಗಿ ಸೆ.25ಕ್ಕೆ 90 ದಿನಗಳು ಪೂರ್ಣಗೊಳ್ಳಲಿವೆ. ಹೀಗಾಗಿ ಶೀಘ್ರ ದೋಷಾರೋಪಪಟ್ಟಿ ಸಲ್ಲಿಸಬೇಕು. ಇಲ್ಲದಿದ್ದರೆ ಆರೋಪಿಗಳು ಜಾಮೀನು ಪಡೆಯುವ ಸಾಧ್ಯತೆ ಇದೆ' ಎಂದು ಸಾಲಿಸಿಟರ್‌ ಜನರಲ್ ತುಷಾರ್‌ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ, ವಿ.ಮೋಹನಾ ಅವರನ್ನು ಒಳಗೊಂಡ ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್‌ ಜುಲೈ 27ರಂದು ನಾಲ್ವರು ಸದಸ್ಯರ ಎಸ್‌ಐಟಿ ರಚನೆ ಮಾಡಿದೆ.

105 ಬಾರಿ ಕಳ್ಳತನ: ಸಿ.ಸಿ.ಟಿ.ವಿಯಲ್ಲಿ ದಾಖಲು ರಾಮಮಂದಿರದಲ್ಲಿ 105 ಬಾರಿ ದೇಣಿಗೆ ಕಳ್ಳತನ ನಡೆಸಿರುವುದು ದೇಗುಲದ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ದಾಖಲಾಗಿದೆ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ತುಷಾರ್‌ ಮೆಹ್ತಾ ಅವರು ಎಸ್‌ಐಟಿ ತನಿಖೆಯ ಸ್ಥಿತಿಗತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಅದರಲ್ಲಿ ಸಿ.ಸಿ.ಟಿ.ವಿ ದೃಶ್ಯಾವಳಿಗಳು ಮೊಬೈಲ್‌ ದತ್ತಾಂಶ ಮತ್ತು ಕರೆ ವಿವರಗಳು ಪ್ರಕರಣದ ಪ್ರಮುಖ ಸಾಕ್ಷ್ಯಗಳು ಎಂದು ತಿಳಿಸಲಾಗಿದೆ. ಸಿ.ಸಿ.ಟಿ.ದೃಶ್ಯಾವಳಿಗಳು ಆರೋಪಿಗಳ ವಿರುದ್ಧದ ಪ್ರಬಲ ಸಾಕ್ಷ್ಯ ಒದಗಿಸಿವೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನೂ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries