ಕ್ವೆಟಾ: ಬಲೂಚಿಸ್ತಾನದಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳ ಮೇಲೆ ನಡೆದ ಎರಡು ಪ್ರತ್ಯೇಕ ದಾಳಿಗಳಲ್ಲಿ ಕನಿಷ್ಠ 25 ಸೈನಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ದಾಳಿಯ ಹೊಣೆಯನ್ನು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‍ಎ) ವಹಿಸಿಕೊಂಡಿದೆ. ಝಿಯಾರತ್ ಕ್ರಾಸ್‍ನಲ್ಲಿ ಪಾಕಿಸ್ತಾನಿ ಸೇನೆಯ ವಾಹನಗಳ ಸಾಲನ್ನು ಗುರಿಯಾಗಿಸಿದ್ದು ಮಿಲಿಟರಿ ಟ್ರಕ್ ಸೇರಿದಂತೆ ಎರಡು ವಾಹನಗಳಿಗೆ ನೇರವಾಗಿ ದಾಳಿ ಮಾಡಿ ಅವುಗಳನ್ನು ಧ್ವಂಸಗೊಳಿಸಲಾಗಿದೆ.
ಈ ದಾಳಿಯಲ್ಲಿ 18 ಪಾಕಿಸ್ತಾನಿ ಸೇನಾ ಸಿಬ್ಬಂದಿ ಹತರಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಗಾಯಗೊಂಡ ಐದು ಸಿಬ್ಬಂದಿ ತಪ್ಪಿಸಿಕೊಂಡಿದ್ದಾರೆ ಎಂದು ಬಿಎಲ್‍ಎ ಹೇಳಿದೆ.
ಸುರಾಬ್‍ನ ಹಾಜಿಕಾ ಪ್ರದೇಶದಲ್ಲಿ ಪಾಕಿಸ್ತಾನಿ ಪಡೆಗಳನ್ನು ಗುರಿಯಾಗಿಸಿಕೊಂಡು ರಿಮೋಟ್ ಕಂಟ್ರೋಲ್ ಮೂಲಕ ನಡೆಸಿದ ದಾಳಿಯಲ್ಲಿ ಭದ್ರತಾ ಪಡೆಗಳ ಒಂದು ವಾಹನ ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ಏಳು ಸಿಬ್ಬಂದಿ ಹತರಾಗಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

