ಕಾಸರಗೋಡು: ನಗರದ ಕೂಡ್ಲು ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶಿಲಾಮಯ ಗರ್ಭಗುಡಿ ಮತ್ತು ನಮಸ್ಕಾರ ಮಂಟಪದ ಕೆಲಸ ಅಂತಿಮ ಹಂತಕ್ಕೆ ತಲುಪಿದ್ದು, ಮುಂದಿನ ಜನವರಿಯಲ್ಲಿ ಪುನ:ಪ್ರತಿಷ್ಠಾ ಬ್ರಹ್ಮಕಲಶ ನಡೆಸುವ ಕುರಿತು ಚಿಂತಿಸಲು ಸೆ. 27ರಂದು ಬೆಳಗ್ಗೆ 10ಕ್ಕೆ ದೇವಸ್ಥಾನ ವಠಾರದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರ, ಪರವೂರ ಭಕ್ತರು ಹಾಗೂ ಸಂಬಂಧಪಟ್ಟವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನವೀಕರಣ ಸಮಿತಿ ಪ್ರಕಟಣೆ ತಿಳಿಸಿದೆ.

