ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾಸರಗೋಡು, ಬೇಕಲ - ಹೊಸದುರ್ಗ ಉಪಜಿಲ್ಲಾ ಸಮ್ಮೇಳನ ಸೆ.27ರಂದು ಬೆಳಗ್ಗೆ 10ಕ್ಕೆ ಕಾಸರಗೋಡು ಬೀರಂತಬೈಲಿನ ' ಕನ್ನಡ ಅಧ್ಯಾಪಕ ಭವನ'ದಲ್ಲಿ ನಡೆಯುವುದು. ಕಾಸರಗೋಡು ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ ಸಮ್ಮೇಳನ ಉದ್ಘಾಟಿಸುವರು. ಬೇಕಲ- ಹೊಸದುರ್ಗ ಉಪಜಿಲ್ಲಾ ಸಮಿತಿ ಅಧ್ಯಕ್ಷ ವಿಠಲ ಅಡ್ವಳ ಅಧ್ಯಕ್ಷತೆ ವಹಿಸುವರು. ನಿವೃತ್ತ ಉಪಜಿಲ್ಲಾ ವಿದ್ಯಾಧಿಕಾರಿ ಕೆ ಪುಂಡರೀಕಾಕ್ಷ ಆಚಾರ್ಯ, ಕಾಸರಗೋಡು ಕನ್ನಡ ಸಂಸ್ಕøತಿ ಮತ್ತು ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಕೆ. ಸತ್ಯನಾರಾಯಣರಾವ್, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷ ವಿಶಾಲಾಕ್ಷ ಪುತ್ರಕಳ ಮುಖ್ಯ ಅತಿಥಿಗಳಾಗಿರುವರು.
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ .ಎ, ಉಪಾಧ್ಯಕ್ಷೆ ಯಶೋದ ಕೆ.ಎ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕೆ.ವಿ ಕಾಸರಗೋಡು ಉಪಜಿಲ್ಲಾ ಉಪಾಧ್ಯಕ್ಷೆ ವಿಜಯ ಕುಮಾರಿ ಶುಭಾಶಂಸನೆಗೈಯುವರು
ಈ ಸಂದರ್ಭ ಕಾಸರಗೋಡು ಉಪ ಜಿಲ್ಲಾ ಅಧ್ಯಕ್ಷ ಕುಶ ಪಿ.ಎಲ್ ಅವರ ಅಧ್ಯಕ್ಷತೆಯಲ್ಲಿ ಪ್ರತಿನಿಧಿ ಸಮ್ಮೇಳನ ನಡೆಯುವುದು. ವರದಿ ಮಂಡನೆ, ಲೆಕ್ಕಪತ್ರ ಮಂಡನೆಯ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ನಡೆಯುವುದು.

