ಬದಿಯಡ್ಕ: ಸಂಪೂರ್ಣ ಮಾದಕ ದ್ರವ್ಯ ಮುಕ್ತ ಅಭಿಯಾನ ಅಪರೇಷನ್ ತೂಫಾನ್ ದ ನಾರ್ಕೋ ಹಂಟ್ 2ನೇ ಹಂತದ ಪಂಚಾಯತಿ ಮಟ್ಟದ ಉದ್ಘಾಟನೆ ಸೋಮವಾರ ಬದಿಯಡ್ಕ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಶಂಕರ ಅವರು ಯುವಜನತೆಯನ್ನು ಮಾದಕ ವ್ಯಸನದಿಂದ ರಕ್ಷಿಸುವ ಮತ್ತು ಸ್ಥಳೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಅಗತ್ಯವನ್ನು ತಿಳಿಸಿದರು. ಮಾದಕ ದ್ರವ್ಯಗಳ ಹಾವಳಿಯು ನಮ್ಮ ಯುವಸಮುದಾಯ ಹಾಗೂ ಭವಿಷ್ಯದ ಪೀಳಿಗೆಯನ್ನು ನಾಶಪಡಿಸುತ್ತಿದೆ. ಪೊಲೀಲಿಸ್ ಮತ್ತು ಅಬಕಾರಿ ಇಲಾಖೆಯ `ಆಪರೇಷನ್ ತೂಫಾನ್' ನಂತಹ ಕಠಿಣ ಕ್ರಮಗಳ ಜೊತೆಗೆ ಸ್ಥಳೀಯ ಆಡಳಿತ ಮತ್ತು ಸಾರ್ವಜನಿಕರು ಒಟ್ಟಾಗಿ ಶ್ರಮಿಸಿದಾಗ ಮಾತ್ರ ಮಾದಕ ದ್ರವ್ಯ ಮುಕ್ತ ವಾತಾವರಣ ನಿರ್ಮಿಸಲು ಸಾಧ್ಯ ಎಂದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಸ್ಥಾಯಿಸಮಿತಿ ಅಧ್ಯಕ್ಷರುಗಳಾದ ಹಮೀದ್ ಕೆಡೆಂಜಿ, ರಜನಿ ಜಿ.ಆರ್. ಅವಿನಾಶ್ ರೈ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅಜಿತ್ ಕುಮಾರ್ ಮಾತನಾಡಿದರು. ವಿವಿಧ ವಾರ್ಡುಗಳ ಜನಪ್ರತಿನಿಧಿಗಳು, ಶಾಲಾ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಕುಟುಂಬಶ್ರೀ ಸಿಡಿಎಸ್ ಸದಸ್ಯರು, ಸಾರ್ವಜನಿಕರು, ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

.jpg)
.jpg)
