HEALTH TIPS

ನೇಪಾಳ ಪ್ರವಾಹದಿಂದ 30 ಸಾವಿರಕ್ಕೂ ಅಧಿಕ ಜನರಿಗೆ ತೊಂದರೆ: ವರದಿ

ಕಠ್ಮಂಡು:ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಸುಮಾರು 32 ಸಾವಿರಕ್ಕೂ ಅಧಿಕ ಜನರು ಬಾಧಿತರಾಗಿದ್ದಾರೆ ಎಂದು ಸರ್ಕಾರದ ಪ್ರಾಥಮಿಕ ವರದಿಯೊಂದು ತಿಳಿಸಿದೆ. 


ನೇಪಾಳದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕುರಿತು ಮಾಹಿತಿ ನೀಡಿದ್ದು, ಪ್ರವಾಹದಿಂದಾಗಿ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಕೂಡ ಹಾನಿಯಾಗಿದೆ ಎಂದು ಹೇಳಿದೆ.

ಪ್ರಾಥಮಿಕ ವರದಿಯ ಪ್ರಕಾರ, ಪ್ರವಾಹದಿಂದ 32,933 ಜನರು ಬಾಧಿತರಾಗಿದ್ದಾರೆ. ಶೈಕ್ಷಣಿಕ ಸಂಸ್ಥೆಗಳಿಗೆ ಹಾನಿಯಾಗಿರುವುದರಿಂದ 6,500 ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. 4 ಆಸ್ಪತ್ರೆಗಳು, 55 ಕಿ.ಮೀ ರಸ್ತೆ, 37 ಸೇತುವೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಮಾಹಿತಿ ನೀಡಿದೆ.

ನೇಪಾಳ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 1,295ಕ್ಕೆ ಏರಿಕೆಯಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆ.26ರಂದು ನೇಪಾಳ-ಟಿಬೆಟ್‌ ಗಡಿಯಲ್ಲಿ ಹಿಮಬಂಡೆ ಕುಸಿದಿದ್ದು, ಹಠಾತ್‌ ಪ್ರವಾಹಕ್ಕೆ ಕಾರಣವಾಗಿತ್ತು. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries