ಪಟ್ನಾ: ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, 14 ಜಿಲ್ಲೆಗಳಲ್ಲಿ ಒಟ್ಟು 40 ಲಕ್ಷಕ್ಕೂ ಹೆಚ್ಚು ಮಂದಿ ಬಾಧಿತರಾಗಿದ್ದಾರೆ. ಐದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ' ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದರು.
'14 ಜಿಲ್ಲೆಗಳ, 514 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 40.21 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ' ಎಂದು ವಿಪತ್ತು ನಿರ್ವಹಣಾ ಇಲಾಖೆಯು ತಿಳಿಸಿದೆ.
ಸಪ್ಟೆಂಬರ್‌ನಲ್ಲಿ ರಾಜ್ಯದಲ್ಲಿ ಈವರೆಗೆ 79.6 ಮಿಲಿ ಮೀಟರ್ ಮಳೆಯಾಗಿದೆ. ಇದು ಈ ಸಮಯದಲ್ಲಿ ಸುರಿಯುವ ಮಳೆ ಸಾಮಾನ್ಯಕ್ಕಿಂತ ಶೇ31ರಷ್ಟು ಹೆಚ್ಚು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

