HEALTH TIPS

ಐದು ವರ್ಷ, ಐಐಟಿಗಳಲ್ಲಿ 45 ವಿದ್ಯಾರ್ಥಿಗಳು ಆತ್ಮಹತ್ಯೆ: ಕೆಳ ಸಮುದಾಯದವರೇ ಹೆಚ್ಚು

 ನವದೆಹಲಿ: ದೇಶದ 23 ಭಾರತೀಯ ತಂತ್ರಜ್ಞಾನ ಸಂಸ್ಥೆಗಳಲ್ಲಿ (ಐಐಟಿ) 2020-21ರಿಂದ 2024-25ರ ಅವಧಿಯಲ್ಲಿ 45 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 28 ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡ (ಎಸ್‌ಟಿ) ಮತ್ತು ಇತರೆ ಹಿಂದುಳಿದ ವರ್ಗ (ಒಬಿಸಿ) ಸಮುದಾಯಗಳಿಗೆ ಸೇರಿದವರು ಎಂದು ವರದಿಯಾಗಿದೆ. 


2025ರ ಡಿಸೆಂಬರ್ 8ರಂದು ಲೋಕಸಭೆಯಲ್ಲಿ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಸಂಬಂಧಿಸಿದಂತೆ ಎಲ್ಲಾ ಐಐಟಿಗಳಿಂದ ಸಂಗ್ರಹಿಸಲಾದ ಮಾಹಿತಿಯಲ್ಲಿ ಈ ವಿವರ ಬಹಿರಂಗವಾಗಿವೆ.

ಆತ್ಮಹತ್ಯೆ ಮಾಡಿಕೊಂಡ 45 ವಿದ್ಯಾರ್ಥಿಗಳ ಪೈಕಿ 12 ಒಬಿಸಿ, 9 ಎಸ್‌ಸಿ ಮತ್ತು 7 ಎಸ್‌ಟಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿದ್ದಾರೆ. 16 ವಿದ್ಯಾರ್ಥಿಗಳು ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದಾರೆ ಮತ್ತು ಒಬ್ಬರು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (ಇಡಬ್ಲ್ಯುಎಸ್) ಸೇರಿದವರು ಇದ್ದಾರೆ.

2023-24ರಲ್ಲಿ ಅತಿ ಹೆಚ್ಚು ಪ್ರಕರಣ

2023-24ರಲ್ಲಿ ಐಐಟಿಗಳಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಆ ವರ್ಷ 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. 2022-23ರಲ್ಲಿ 6 ಪ್ರಕರಣಗಳು ಮತ್ತು 2024-25ರಲ್ಲಿ 13 ಪ್ರಕರಣಗಳು ವರದಿಯಾಗಿವೆ.

ಐಐಟಿ ಹೈದರಾಬಾದ್‌ನಲ್ಲಿ ಹೆಚ್ಚು ಪ್ರಕರಣ

ಕಳೆದ ಐದು ವರ್ಷಗಳ ಅಂಕಿಅಂಶಗಳನ್ನು ಗಮನಿಸಿದರೆ, ಐಐಟಿ ಹೈದರಾಬಾದ್‌ನಲ್ಲಿ ಅತಿ ಹೆಚ್ಚು, ಅಂದರೆ 7 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ.

ಐಐಟಿ ಖರಗ್‌ಪುರ, ಐಐಟಿ ದೆಹಲಿ ಮತ್ತು ಐಐಟಿ ಕಾನ್ಪುರದಲ್ಲಿ ತಲಾ 6 ಪ್ರಕರಣಗಳು ವರದಿಯಾಗಿವೆ. ಐಐಟಿ ಮದ್ರಾಸ್‌ನಲ್ಲಿ 5 ಹಾಗೂ ಐಐಟಿ (ಬಿಎಚ್‌ಯು) ವಾರಣಾಸಿಯಲ್ಲಿ 4 ಪ್ರಕರಣಗಳು ದಾಖಲಾಗಿವೆ.

2024-25ರ ಅಂಕಿಅಂಶ

2024-25ರಲ್ಲಿ ಆತ್ಮಹತ್ಯೆ ಮಾಡಿಕೊಂಡ 13 ವಿದ್ಯಾರ್ಥಿಗಳ ಪೈಕಿ ನಾಲ್ವರು ಒಬಿಸಿ, ಮೂವರು ಎಸ್‌ಟಿ ಮತ್ತು ಇಬ್ಬರು ಎಸ್‌ಸಿ ಸಮುದಾಯಕ್ಕೆ ಸೇರಿದವರು. ಉಳಿದ ನಾಲ್ವರು ಸಾಮಾನ್ಯ ವರ್ಗಕ್ಕೆ ಸೇರಿದವರಾಗಿದ್ದಾರೆ.

2020-21ರಿಂದ 2024-25ರ ಅವಧಿಯಲ್ಲಿ ವಿವಿಧ ಐಐಟಿಗಳಲ್ಲಿ 8 ಅಸಹಜ ಸಾವುಗಳು ಕೂಡ ವರದಿಯಾಗಿವೆ. ಆದರೆ, ಈ ಪ್ರಕರಣಗಳನ್ನು 45 ಆತ್ಮಹತ್ಯೆ ಪ್ರಕರಣಗಳ ಸಂಖ್ಯೆಯಲ್ಲಿ ಸೇರಿಸಿಲ್ಲ.

ಆತ್ಮಹತ್ಯೆಗೆ ಕಾರಣದ ಮಾಹಿತಿ ಇಲ್ಲ

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕೋರ್ಸ್‌ವಾರು ವಿವರಗಳು ಹಾಗೂ ಅವರ ಸಾವಿನ ಸಂದರ್ಭಗಳ ಕುರಿತು ಸಂಪೂರ್ಣ ಮಾಹಿತಿಯನ್ನು ದಾಖಲೆಗಳಲ್ಲಿ ನೀಡಿಲ್ಲ. ಹಾಗಾಗಿ ಈ ಅಂಕಿಅಂಶಗಳನ್ನು ಆಧರಿಸಿ ವಿದ್ಯಾರ್ಥಿಗಳ ಸಾವಿಗೆ ನಿರ್ದಿಷ್ಟ ಕಾರಣ ನಿರ್ಧರಿಸಲು ಸಾಧ್ಯವಿಲ್ಲ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries