HEALTH TIPS

'ದೇಶದ್ರೋಹಿ' ಜ್ಞಾನೇಶ್ ಕುಮಾರ್‌ ರಾಜೀನಾಮೆ ನೀಡಲಿ: 48 ಗಂಟೆಗಳ ಗಡುವು ನೀಡಿದ CJP

ನವದೆಹಲಿ: 'ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳ ಒಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು' ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಗುರುವಾರ ಎಚ್ಚರಿಕೆ ನೀಡಿದೆ. 


ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಪಿ ಸಂಚಾಲಕ ಅಭಿಜಿತ್ ದೀಪ್ಕೆ, 'ಜ್ಞಾನೇಶ್ ಕುಮಾರ್‌ ಅತಿ ದೊಡ್ಡ ದೇಶದ್ರೋಹಿ. 

ಬಿಜೆಪಿ ನಿರ್ದೇಶನದಂತೆ ಅವರು ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದಾರೆ. ವಿವಿಧ ರಾಜ್ಯಗಳಲ್ಲಿ ವಿರೋಧ ಪಕ್ಷಗಳನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ' ಎಂದು ಆರೋಪಿಸಿದರು.

'ಬಿಜೆಪಿಯ ಚುನಾವಣಾ ಗೆಲುವುಗಳ ಹಿಂದಿರುವ ಪ್ರಮುಖ ವ್ಯಕ್ತಿ ಜ್ಞಾನೇಶ್ ಕುಮಾರ್. ಅವರು ಬಿಜೆಪಿಯ ನಿಜವಾದ ಹೀರೊ. ಅವರ ನೇಮಕಾತಿಯ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಹರಿಯಾಣ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿಯ ಮತಗಳ ಪ್ರಮಾಣ ಹೆಚ್ಚಾಗಿದೆ' ಎಂದು ಹೇಳಿದರು.

ಚುನಾವಣಾ ಆಯೋಗದ ಹಲವು ನಿರ್ಧಾರಗಳು ಮತ್ತು ಆದೇಶಗಳಿಗೆ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪ ದಾಖಲಿಸಿದ್ದಾರೆ ಎಂದು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಬುಧವಾರ ವರದಿ ಮಾಡಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಸಿಜೆಪಿ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು:

  • ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಬೇಕು.

  • ಎಸ್‌ಐಆರ್‌ಗೆ ಮುನ್ನ ಜಾರಿಯಲ್ಲಿದ್ದ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು.

  • ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದ 2023ರ ಕಾಯ್ದೆಯನ್ನು ರದ್ದುಗೊಳಿಸಬೇಕು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries