ನವದೆಹಲಿ: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಸಾರಿಗೆ ನಿಗಮದ ಬಸ್ ಚಾಲಕರು ನಡೆಸುತ್ತಿರುವ ಮುಷ್ಕರ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಜನಸಾಮಾನ್ಯರು ಪರದಾಡುತ್ತಿದ್ದಾರೆ.
'ರಸ್ತೆಯಲ್ಲಿ ಬಸ್‌ಗಳು ವಿರಳವಾಗಿವೆ. ಪರಿಸ್ಥಿತಿ ಆದಷ್ಟು ಬೇಗ ತಿಳಿಗೊಳ್ಳುವ ನಿರೀಕ್ಷೆಯಿದೆ. ಪ್ರತಿಭಟನೆಯ ಕಾರಣಕ್ಕೆ ಆಟೊ ರಿಕ್ಷಾಗಳ ಪ್ರಯಾಣ ದರವು ಹೆಚ್ಚಳವಾಗಿದೆ' ಎಂದು ಸಾರ್ವಜನಿಕರೊಬ್ಬರು ತಿಳಿಸಿದರು.
ಮೆಟ್ರೊದಲ್ಲಿ ಜನದಟ್ಟಣೆ: ಬಸ್ ಚಾಲಕರ ಪ್ರತಿಭಟನೆಯ ಕಾರಣದಿಂದಾಗಿ ಗುರುವಾರ 82,44,903 ಮಂದಿ ದೆಹಲಿ ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ. ಒಂದೇ ದಿನದಲ್ಲಿ ಇಷ್ಟು ಪ್ರಯಾಣಿಕರು ಮೆಟ್ರೊ ರೈಲಿನಲ್ಲಿ ಪ್ರಯಾಣ ಮಾಡಿರುವುದು ಇದೇ ಮೊದಲು ಎಂದು ದೆಹಲಿ ಮೆಟ್ರೊ ರೈಲು ನಿಗಮ ತಿಳಿಸಿದೆ.
ಬುಧವಾರ 80,71,630 ಮಂದಿ ಮೆಟ್ರೊದಲ್ಲಿ ಪ್ರಯಾಣಿಸಿದ್ದರು. ಜನದಟ್ಟಣೆ ಹೆಚ್ಚಾಗಿರುವ ಕಾರಣ ಮೆಟ್ರೊ ರೈಲುಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.

