ಖಾರ್ಟೂಮ್: ಸುಡಾನ್‍ನ ಪಶ್ಚಿಮ ಕೊರ್ಡೊಫಾನ್ ಪ್ರಾಂತದ ನುಹುದ್ ಪಟ್ಟಣದ ಅಲ್-ಜಾರಾ ಚಿನ್ನದ ಗಣಿಯಲ್ಲಿ ಸಂಭವಿಸಿದ ಚಿನ್ನದ ಗಣಿ ಕುಸಿತದಿಂದ ಕನಿಷ್ಠ 67 ಜನರು ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸಂಸ್ಥೆ ಬುಧವಾರ ತಿಳಿಸಿದೆ.
ಕಳೆದ ಮೂರು ವರ್ಷಗಳಿಗೂ ಹೆಚ್ಚು ಕಾಲ ಸುಡಾನ್ ಸೇನೆಯ ವಿರುದ್ಧ ಹೋರಾಡುತ್ತಿರುವ ಅರೆ ಸೇನಾಪಡೆಯ ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ದುರ್ಘಟನೆ ಸಂಭವಿಸಿದೆ.
ಗಣಿಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಿದ್ದರು ಎಂಬ ಬಗ್ಗೆ ಮಾಹಿತಿಯಿಲ್ಲ. 98 ಅಡಿಗಿಂತ ಹೆಚ್ಚಿನ ಆಳದಲ್ಲಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಬದುಕುಳಿದವರನ್ನು ಹುಡುಕುವ ಯಂತ್ರೋಪಕರಣಗಳು ಇಲ್ಲದ ಕಾರಣ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

