HEALTH TIPS

ಬಿ.ಇಡಿ ಪದವೀಧರ ಶಿಕ್ಷಕರಿಗೆ 6 ತಿಂಗಳ ತರಬೇತಿ: ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ: ಬಿ.ಇಡಿ ಪದವಿ ಪಡೆದಿರುವ ಸೇವಾನಿರತ ಶಿಕ್ಷಕರಿಗೆ ಪ್ರಾಥಮಿಕ ಶಿಕ್ಷಕರ ಶಿಕ್ಷಣದ (ಪಿಟಿಇ) ಅಡಿಯಲ್ಲಿ 6 ತಿಂಗಳ ಸರ್ಟಿಫಿಕೇಟ್‌ ಕೋರ್ಸ್‌ (ಬ್ರಿಡ್ಜ್‌ ಕೋರ್ಸ್‌) ಅನ್ನು ಪ್ರಾರಂಭಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತಿಳಿಸಿದೆ.


ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಗುರುವಾರ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ತರಬೇತಿಯನ್ನು ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್‌ಐಒಎಸ್) ಮೂಲಕ ಜಾರಿಗೆ ತರಲಾಗುವುದು ಎಂದು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಅದು ತಿಳಿಸಿದೆ.

ಮಕ್ಕಳ ಕೇಂದ್ರಿತ, ಎಲ್ಲರನ್ನೂ ಒಳಗೊಂಡ ಮತ್ತು ಅಭಿವೃದ್ಧಿಗೆ ಸೂಕ್ತವಾದ ಬೋಧನಾ ವ್ಯವಸ್ಥೆಯೊಂದಿಗೆ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ. ಇದು ಪ್ರಾಥಮಿಕ ಶಿಕ್ಷಣದ ಗುಣಮಟ್ಟವನ್ನು ಬಲಪಡಿಸುತ್ತದೆ. ಅಗತ್ಯ ಕೌಶಲ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಶಿಕ್ಷಕರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದೆ.

ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎನ್‌ಸಿಟಿಇ) ಪ್ರಕಾರ ಈ ತರಬೇತಿಯನ್ನು ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ಶಿಕ್ಷಕರಿಗೆ 10 ದಿನ ಆನ್‌ಲೈನ್‌ ಹಾಗೂ 20 ದಿನ ಆಫ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತದೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries