HEALTH TIPS

ಸೆ. 7 ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ಮೇಳ

ಕಾಸರಗೋಡು: ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್‍ಶಿಪ್ ಮೇಳ  ಸೆಪ್ಟೆಂಬರ್ 7 ರಂದು ಬೆಳಿಗ್ಗೆ 10ಕ್ಕೆ ಐಟಿಐ ನಲ್ಲಿ ನಡೆಯಲಿದೆ. ಕೈಗಾರಿಕಾ ತರಬೇತಿ ಇಲಾಖೆಯ ನೇತೃತ್ವದಲ್ಲಿ, ಕೇಂದ್ರ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಹಾಗೂ ರಾಜ್ಯ ಕಾರ್ಮಿಕ ಮತ್ತು ಕೌಶಲ್ಯ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. 

ಜಿಲ್ಲೆಯ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಟ್ರೇಡ್ ಅಪ್ರೆಂಟಿಸ್‍ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಇಂಜಿನಿಯರಿಂಗ್ ಮತ್ತು ನಾನ್-ಇಂಜಿನಿಯರಿಂಗ್ ವಿಭಾಗಗಳಲ್ಲಿ ಐಟಿಐ ಅರ್ಹತೆ ಪಡೆದ ತರಬೇತಿದಾರರು ಇದರಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಾಗವಹಿಸುವವರು ತಮ್ಮ ಅರ್ಹತೆಯನ್ನು ಸಾಬೀತುಪಡಿಸುವ ಪ್ರಮಾಣಪತ್ರಗಳು ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ(9747432402, 04994 256440) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries