HEALTH TIPS

ಕುಕಿ ಸಮುದಾಯದ 7 ಜನರ ಬಂಧನ: ಪ್ರತಿಭಟನೆ

ಇಂಫಾಲ/ ಕಾಂಗ್ಪೋಕ್ಪಿ (PTI): ಕೇಂದ್ರ ಮೀಸಲು ಪೊಲೀಸ್ ಪಡೆಯು (ಸಿಆರ್‌ಪಿಎಫ್) ಕುಕಿ ಸಮುದಾಯದ ಏಳು ಜನರನ್ನು ಬಂಧಿಸಿದ್ದನ್ನು ವಿರೋಧಿಸಿ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯ ಮೋಟ್‌ಬಂಗ್ ಗ್ರಾಮದಲ್ಲಿ ಪ್ರತಿಭಟನೆ ನಡೆಯಿತು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. 


'ಶನಿವಾರ ರಾತ್ರಿ 10 ಗಂಟೆಗೆ ಆರಂಭವಾದ ಪ್ರತಿಭಟನೆ ಮಧ್ಯರಾತ್ರಿವರೆಗೂ ಮುಂದುವರಿಯಿತು. ಪ್ರತಿಭಟನಕಾರರು ರಸ್ತೆ ತಡೆ ನಡೆಸಿ, ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದರು' ಎಂದು ಅವರು ಹೇಳಿದ್ದಾರೆ.

'ಪ್ರತಿಭಟನಕಾರರನ್ನು ಚದುರಿಸಲು ಭದ್ರತಾ ಪಡೆಗಳವರು ಹಲವು ಸುತ್ತು ಅಶ್ರುವಾಯು ಶೆಲ್ ಸಿಡಿಸಿದ್ದಾರೆ. ಭದ್ರತಾ ಸಿಬ್ಬಂದಿಯ ವಾಹನ ತಡೆಯಲೆಂದು ಪ್ರತಿಭಟನಕಾರರು ಹೆದ್ದಾರಿಯನ್ನು ಅಗೆದಿದ್ದರು' ಎಂದು ಮಾಹಿತಿ ನೀಡಿದ್ದಾರೆ.

'ಬಂಧಿತ ಏಳು ಜನರನ್ನು ಬಿಡುಗಡೆ ಮಾಡಲಾಗಿದೆ. ಬಳಿಕ ಪ್ರತಿಭಟನೆ ಕೊನೆಗೊಂಡಿದೆ' ಎಂದು ತಿಳಿಸಿದ್ದಾರೆ.

'ನಾಗಾ ಸಮುದಾಯದ ಪ್ರಾಬಲ್ಯವಿರುವ ಚವಾಂಗ್‌ಕಿನಿಂಗ್ ಗ್ರಾಮದ ಬಳಿಯ ಖೋಲೆನ್ ಗ್ರಾಮದ ಏಳು ಜನರನ್ನು ಯಾವುದೇ ಕಾರಣ ನೀಡದೆ ಬಂಧಿಸಲಾಗಿದೆ' ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries