HEALTH TIPS

ಪ್ರವಾಹ ಮತ್ತು ಭೂಕುಸಿತ; ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 9 ಕ್ಕೆ ಏರಿಕೆ

ತಿರುವನಂತಪುರಂ: ರಾಜ್ಯದಲ್ಲಿ ಮಳೆ ಸಂಬಂಧಿತ ಘಟನೆಗಳು ತೀವ್ರವಾಗಿವೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿದೆ.

ಭಾರೀ ಮಳೆಯಾಗುವ ಸಾಧ್ಯತೆಯ ಕಾರಣ ಆರು ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. 


ಪತ್ತನಂತಿಟ್ಟ, ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಗಂಟೆಗೆ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.ಕೊಟ್ಟಪುಳ, ಟಿ.ಕೆ. ಕಾಲೋನಿ, ಪೂಕೊಟ್ಟುಂಪಡಂನಲ್ಲಿ ಅನಿರೀಕ್ಷಿತ ಪ್ರವಾಹ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ.ಪ್ರವಾಹದಿಂದ ಕೊಚ್ಚಿಹೋಗಿದ್ದ ಐದು ಜನರ ಶವಗಳನ್ನು ಇಲ್ಲಿಯವರೆಗೆ ಹೊರತೆಗೆಯಲಾಗಿದೆ.ಮೃತ ಮೂವರನ್ನು ಕೊಟ್ಟಕ್ಕಲ್ ಎಡರಿಕೋಡ್ ಮೂಲದ ಮಂಗದನ್ ಅನಸ್ ಯಾಸೀನ್, ತಿರೂರ್ ಮೂಲದ ಮುಹಮ್ಮದ್ ಕುಟ್ಟಿ ಮತ್ತು ವಂಡೂರು ಮೂಲದ ಕುಪ್ಪನಾಥ್ ಸಜ್ಜದ್ ಎಂದು ಗುರುತಿಸಲಾಗಿದೆ.ಪತ್ತೆಯಾಗಿರುವ ಇನ್ನೆರಡು ಶವಗಳನ್ನು ಇನ್ನೂ ಗುರುತಿಸಲಾಗಿಲ್ಲ. ಪೆÇಲೀಸರು ಮತ್ತು ಅಧಿಕಾರಿಗಳು ತಮ್ಮ ಗುರುತಿನ ಪ್ರಕ್ರಿಯೆಯನ್ನು ಮುಂದುವರೆಸಿದ್ದಾರೆ.ನಾಪತ್ತೆಯಾಗಿರುವ ಒಬ್ಬರಿಗಾಗಿ ಪ್ರದೇಶದಲ್ಲಿ ಇನ್ನೂ ಹುಡುಕಾಟ ನಡೆಯುತ್ತಿದೆ.

ಅಗ್ನಿಶಾಮಕ ದಳ, ಪೋಲೀಸರು, ಸ್ವಯಂಸೇವಕರು ಮತ್ತು ಸ್ಥಳೀಯರು ಜಂಟಿಯಾಗಿ ನದಿ ಮತ್ತು ಪಕ್ಕದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರವಾಹದಿಂದ ಕೊಚ್ಚಿಹೋದ ಮೂವರನ್ನು ಮೊದಲೇ ರಕ್ಷಿಸಲಾಗಿತ್ತು. 









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries