HEALTH TIPS

Adani ಮಾನನಷ್ಟ ಪ್ರಕರಣ | ಪತ್ರಕರ್ತ ರವಿ ನಾಯರ್‌ ಗೆ ಗುಜರಾತ್‌ ನ್ಯಾಯಾಲಯದಿಂದ ಜಾಮೀನು

ಗಾಂಧಿನಗರ: ಅದಾನಿ ಗ್ರೂಪ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್ ಅವರಿಗೆ ಗುಜರಾತ್ ನ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿದೆ ಎಂದು barandbench.com ವರದಿ ಮಾಡಿದೆ.


ಗಾಂಧಿನಗರದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆಶಿಶ್ ಜೆ.ಎಸ್.ಮಲ್ಹೋತ್ರಾ ಅವರು ನಾಯರ್ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದರು. ನಾಯರ್ ಪರ ವಕೀಲ ಅಭಿಕ್ ಚಿಮ್ನಿ ವಾದ ಮಂಡಿಸಿದರು.

ಈ ವರ್ಷದ ಆರಂಭದಲ್ಲಿ ಇದೇ ಪ್ರಕರಣದಲ್ಲಿ ನಾಯರ್ ಅವರನ್ನು ತಪ್ಪಿತಸ್ಥರೆಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಬಾಕಿ ಇರುವ ಅವಧಿಯಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು.

ಆದರೆ, ಈ ತಿಂಗಳ ಆರಂಭದಲ್ಲಿ ಮೇಲ್ಮನವಿ ನ್ಯಾಯಾಲಯದ ಮುಂದೆ ಹಾಜರಾಗಲು ನಾಯರ್ ವಿಫಲರಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಇದರ ಆಧಾರದಲ್ಲಿ ಸೆಪ್ಟೆಂಬರ್ 17ರಂದು ಅವರನ್ನು ಮತ್ತೆ ವಶಕ್ಕೆ ಪಡೆಯಲಾಗಿತ್ತು.

ಜಾಮೀನು ರಹಿತ ವಾರಂಟ್ ಪ್ರಶ್ನಿಸಿ ನಾಯರ್ ಗುಜರಾತ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್ ಅವರಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿತ್ತು. ಬಳಿಕ ಅವರು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರತ್ಯೇಕವಾಗಿ ಸಾಮಾನ್ಯ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇದೀಗ ನ್ಯಾಯಾಲಯ ಪುರಸ್ಕರಿಸಿದೆ.

► ಪ್ರಕರಣದ ಹಿನ್ನೆಲೆ

ಅದಾನಿ ಸಮೂಹವು ಹಲವು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಆರೋಪಿಸಿ ಸರಣಿ ಟ್ವೀಟ್ ಗಳು ಮತ್ತು ಆನ್ ಲೈನ್ ಲೇಖನಗಳನ್ನು ಪ್ರಕಟಿಸಿದ್ದಕ್ಕಾಗಿ ನಾಯರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಾಗಿತ್ತು.

2021ರ ಸೆಪ್ಟೆಂಬರ್ ನಲ್ಲಿ ಅದಾನಿ ಗ್ರೂಪ್ ಈ ಸಂಬಂಧ ಕ್ರಿಮಿನಲ್ ದೂರು ದಾಖಲಿಸಿತ್ತು. 2020ರ ಅಕ್ಟೋಬರ್ನಿಂದ 2021ರ ಜುಲೈ ನಡುವಿನ ಅವಧಿಯಲ್ಲಿ ನಾಯರ್ ತಮ್ಮ 'ಎಕ್ಸ್' ಖಾತೆ ಹಾಗೂ 'adaniwatch.org' ವೆಬ್ ಸೈಟ್ ನಲ್ಲಿ ಹಲವು ಟ್ವೀಟ್ ಗಳು ಮತ್ತು ಲೇಖನಗಳನ್ನು ಪ್ರಕಟಿಸಿದ್ದಾರೆ ಎಂದು ಕಂಪೆನಿಗಳ ಸಮೂಹ ಆರೋಪಿಸಿತ್ತು.

ಅದಾನಿ ಗ್ರೂಪ್ ಭ್ರಷ್ಟಾಚಾರ, ಆಪ್ತ ಬಂಡವಾಳಶಾಹಿ (crony capitalism), ಪರಿಸರ ಕಾನೂನುಗಳ ದುರ್ಬಳಕೆ, ಸರ್ಕಾರಿ ಸಂಸ್ಥೆಗಳ ದುರುಪಯೋಗ ಹಾಗೂ ಅನೈತಿಕ ವ್ಯಾಪಾರ ಪದ್ಧತಿಗಳಲ್ಲಿ ತೊಡಗಿದೆ ಎಂದು ನಾಯರ್ ತಮ್ಮ ಪೋಸ್ಟ್ ಗಳು ಮತ್ತು ಲೇಖನಗಳಲ್ಲಿ ಆರೋಪಿಸಿದ್ದರು.

ಈ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನಾಯರ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿತ್ತು. ಅವರ ಆರೋಪಗಳು ನ್ಯಾಯಯುತ ಟೀಕೆಯ ಮಿತಿಯನ್ನು ಮೀರಿ ಕ್ರಿಮಿನಲ್ ಮಾನನಷ್ಟಕ್ಕೆ ಸಮನಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ತಪ್ಪಿತಸ್ಥರೆಂದು ತೀರ್ಪು ಬಂದ ಬಳಿಕ ನಾಯರ್ ಅವರು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ಬಾಕಿ ಇರುವ ಸಂದರ್ಭದಲ್ಲಿ ಅವರಿಗೆ ಜಾಮೀನು ನೀಡಲಾಗಿತ್ತು.

ಆದರೆ, ಈ ತಿಂಗಳ ಆರಂಭದಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲರಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಬಳಿಕ ನಾಯರ್ ಸೆಷನ್ಸ್ ನ್ಯಾಯಾಲಯದ ಮುಂದೆ ಹಾಜರಾಗಿ, ವಾರಂಟ್ ಪ್ರಶ್ನಿಸಿದ್ದರು. ಆದರೆ, ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿ ಸೆಪ್ಟೆಂಬರ್ 17ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಈ ಹಿನ್ನೆಲೆಯಲ್ಲಿ ನಾಯರ್ ಅವರು ಸಾಮಾನ್ಯ ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಆಶಿಶ್ ಜೆ.ಎಸ್. ಮಲ್ಹೋತ್ರಾ ಅವರು ಗುರುವಾರ ಜಾಮೀನು ಮಂಜೂರು ಮಾಡಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries