HEALTH TIPS

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಗೆ ಪದ್ಮಭೂಷಣ ಪ್ರಶಸ್ತಿ ನೀಡಬೇಕು: BJP ನಾಯಕ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಿಸಿದ್ದಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರಿಗೆ 'ಪದ್ಮಭೂಷಣ' ಪ್ರಶಸ್ತಿ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಆಗ್ರಹಿಸಿದ್ದಾರೆ. 


ಉತ್ತರ 24 ಪರಗಣ ಜಿಲ್ಲೆಯ ಪಾಣಿಹಾಟಿಯಲ್ಲಿ ಮಾತನಾಡಿದ ಅವರು, 'ರಾಜ್ಯದಲ್ಲಿ ಹಿಂಸಾಚಾರ ಮುಕ್ತ ವಿಧಾನಸಭಾ ಚುನಾವಣೆಯನ್ನು ಖಾತ್ರಿಪಡಿಸಿದ ಹಾಗೂ ಬಾಂಗ್ಲಾದ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ ಶ್ರೇಯಸ್ಸು ಜ್ಞಾನೇಶ್‌ಗೆ ಸಲ್ಲುತ್ತದೆ' ಎಂದು ತಿಳಿಸಿದ್ದಾರೆ.

ಜ್ಞಾನೇಶ್ ಕುಮಾರ್ ಅವರಿಗೆ ಕನಿಷ್ಠ ಪದ್ಮಭೂಷಣ ಪ್ರಶಸ್ತಿಯನ್ನಾದರೂ ನೀಡಿ ಗೌರವಿಸಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ತಮ್ಮ ನಿಜವಾದ ಮತಗಳನ್ನು ಚಲಾಯಿಸಲು ಸಾಧ್ಯವಾಗಿದೆ ಎಂಬ ಕಾರಣಕ್ಕೆ ಬಂಗಾಳದ ಜನತೆ ಸಂತಸಗೊಂಡಿದ್ದಾರೆ' ಎಂದಿದ್ದಾರೆ.

ಪಶ್ಚಿಮ ಬಂಗಾಳದಂತಹ ಗಡಿ ರಾಜ್ಯದಲ್ಲಿ ಬಾಂಗ್ಲಾದ ನುಸುಳುಕೋರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಜ್ಞಾನೇಶ್ ಕುಮಾರ್ ಹೆಚ್ಚು ಮುತುವರ್ಜಿ ವಹಿಸಿದ್ದರು ಎಂದು ಭಟ್ಟಾಚಾರ್ಯ ಪ್ರತಿಪಾದಿಸಿದ್ದಾರೆ.

ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿಷಯಕ್ಕೆ ಸಂಬಂಧಿಸಿದಂತೆ, ಭಾರತದ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಮತ್ತು ಇತರ ಇಬ್ಬರು ಆಯುಕ್ತರ ನಡುವೆ ಆಂತರಿಕ ಭಿನ್ನಾಭಿಪ್ರಾಯ ತಲೆದೋರಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇದರ ಬೆನ್ನಲ್ಲೇ ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿವಾದ ಉಂಟಾಗಿರುವ ಬೆನ್ನಲ್ಲೇ ಭಟ್ಟಾಚಾರ್ಯ ಅವರು ಜ್ಞಾನೇಶ್‌ ಬೆಂಬಲಿಸಿ ಹೇಳಿಕೆ ನೀಡಿದ್ದಾರೆ.

'ಪದ್ಮಭೂಷಣ' ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ.

'ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರು ಭಾರತದ ಮತದಾನ ಪ್ರಕ್ರಿಯೆಯನ್ನು ನಾಶಪಡಿಸಿದ್ದಾರೆ. ಹೀಗಾಗಿ ಅವರು ದೇಶದ್ರೋಹಿಗಳು' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಈಚೆಗೆ ಟೀಕಿಸಿದ್ದರು.

ಜ್ಞಾನೇಶ್‌ ಕುಮಾರ್‌ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಭುವನೇಶ್ವರ ಸೇರಿದಂತೆ ದೇಶದ ಹಲವೆಡೆ ಕಾಂಗ್ರೆಸ್‌ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ್ದರು.

ಪ್ರಜಾ ಪ್ರತಿನಿಧಿ (ಆರ್‌ಪಿ) ಕಾಯ್ದೆಯ ಉಲ್ಲಂಘನೆಗಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಮತ್ತು ಆಯೋಗದ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು ಎಂದು ಕೋರಿ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ಗೆ ಶುಕ್ರವಾರ ಅರ್ಜಿ ಸಲ್ಲಿಸಿದ್ದಾರೆ.

ಆರ್‌ಪಿ ಕಾಯ್ದೆ ಉಲ್ಲಂಘನೆ, ಕರ್ತವ್ಯ ಲೋಪದ ಆರೋಪದ ಮೇಲೆ ಉಪ ಚುನಾವಣಾ ಆಯುಕ್ತ ಮನೀಶ್‌ ಗರ್ಗ್‌, ಇಸಿಐ ಐಟಿ ವಿಭಾಗದ ಮುಖ್ಯಸ್ಥರಾದ ಸೀಮಾ ಖನ್ನಾ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿದಾರರಾದ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಕೋರಿದ್ದಾರೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries