HEALTH TIPS

ಆಯುರ್ವೇದ ದಿನಾಚರಣೆ-ಭಿತ್ತಿಪತ್ರಗಳಲ್ಲಿ ಪ್ರಧಾನ ಮಂತ್ರಿ ಭಾವಚಿತ್ರ ಕೈಬಿಟ್ಟಿರುವುದು ಖಂಡನೀಯ: ಬಿಜೆಪಿ ವೈದ್ಯಕೀಯ ಸೆಲ್

ಕಾಸರಗೋಡು: ಮೀಸಲಿಟ್ಟ ಅನುದಾನದ ಶೇ. 60ರಷ್ಟು ಹಣವನ್ನು ಬಳಸಿಕೊಂಡು ರಾಜ್ಯಾದ್ಯಂತ ಆಚರಿಸಲಾದ 11ನೇ ಆಯುರ್ವೇದ ದಿನಾಚರಣೆ ಅಂಗವಾಗಿ ಹೊರತರಲಾದ ಕರಪತ್ರಗಳು ಮತ್ತು ಭಿತ್ತಿಪತ್ರಗಳಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಕೈಬಿಟ್ಟಿರುವ ಕೇರಳ ಸರ್ಕಾರದ ಕ್ರಮ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ  ಕಾಸರಗೋಡು ಜಿಲ್ಲಾ ವೈದ್ಯಕೀಯ ವಿಭಾಗ ಕನ್ವೀನರ್ ವಿರೋಧ ವ್ಯಕ್ತಪಡಿಸಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಯಾರ ಭಾವಚಿತ್ರಗಳನ್ನು ಪ್ರದರ್ಶಿಸಬೇಕು ಎಂಬುದರ ಕುರಿತು ಸುಪ್ರೀಂ ಕೋರ್ಟ್ ಸ್ಪಷ್ಟ ನಿಯಮಾವಳಿಯನ್ನು ರೂಪಿಸಿದೆ. ಸುಪ್ರೀಂ ಕೋರ್ಟ್‍ನ ತೀರ್ಪು ಜಾರಿಯಲ್ಲಿದ್ದರೂ, ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಯವರ ಭಾವಚಿತ್ರವನ್ನು ಕೈಬಿಡುವ ಮೂಲಕ, ಕೇರಳ ಸರ್ಕಾರವು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ನ್ಯಾಯಾಂಗ ನಿಂದನೆ ಎಸಗಿರುವುದಾಗಿ ಸಂಘಟನೆ ಜಿಲ್ಲಾ ಕನ್ವೀನರ್ ಶೈಜು ಚುಲ್ಲಿಪುರಂ ಹೇಳಿಕೆಯಲ್ಲಿ ತಿಳಿಸಿದ್ದಾರೆ.  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries