89 ವರ್ಷದ ಹಜಾರೆ ಅವರು ವೈರಲ್ ಸೋಂಕು ಹಾಗೂ ತೀವ್ರ ನಿರ್ಜಲೀಕರಣದ ಸಮಸ್ಯೆಯಿಂದ ಬಳಲುತ್ತಿದ್ದರು.
ಸೋಮವಾರ ಅಹಿಲ್ಯಾನಗರ ಜಿಲ್ಲೆಯ ಸ್ಥಳೀಯ ಆಸ್ಪತ್ರೆಯಲ್ಲಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ದಕ್ಷಿಣ ಮುಂಬೈನ ಬಾಂಬೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.
ಹಜಾರೆ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಸಮಗ್ರವಾಗಿ ಪರಿಶೀಲಿಸುತ್ತಿದ್ದು, ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ವರದಿಗಳ ಆಧಾರದ ಮೇಲೆ ಮುಂದಿನ ಚಿಕಿತ್ಸಾ ಕ್ರಮವನ್ನು ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

