ಪೆರ್ಲ: ಎಣ್ಮಕಜೆ ಪಂಚಾಯಿತಿ ಪೆರ್ಲ ಪಡ್ರೆ ಸಮೀಪದ ಸಜಂಗದ್ದೆ ನಿವಾಸಿ ಕರಾಡ ಸಮಾಜದ ಹಿರಿಯ ಪುರೋಹಿತ, ಕೃಷಿಕ, 'ಮುದ್ದುವಣ್ಣ' ಎಂದೇ ಪರಿಚಿತವಾಗಿರುವ ಶ್ರೀಧರ ಭಟ್ (65) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.
ಪೌರೋಹಿತ್ಯ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಇವರು ಪೆರ್ಲ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಹೋಮ, ಹವನಾದಿಗಳನ್ನು ನೆರವೇರಿಸುವ ಮೂಲಕ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.


