HEALTH TIPS

ದೇಶದಲ್ಲಿ ಕಲ್ಲಿದ್ದಲು ಕೊರತೆಯಿಲ್ಲ: ಕೇಂದ್ರ ಸಚಿವ ಜಿ. ಕಿಶನ್‌ ರೆಡ್ಡಿ ಸ್ಪಷ್ಟನೆ

ಕೋಲ್ಕತ್ತ (PTI): ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ.ಕಿಶನ್‌ ರೆಡ್ಡಿ ಅವರು ಸೋಮವಾರ ಹೇಳಿದರು.


ವಿದ್ಯುತ್‌ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರೆತ ಇದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಕಲ್ಲಿದ್ದಲು ಸರಬರಾಜು ಮಾಡುತ್ತಿದ್ದೇವೆ. ಪರಿಸ್ಥಿತಿ ಸಹಜವಾಗಿಯೇ ಇದೆ' ಎಂದು ಹೇಳಿದರು.

ದೇಶದ ಹಲವೆಡೆ ಮಳೆ ಕೊರತೆಯಿಂದ ಜಲ ವಿದ್ಯುತ್‌ ಉತ್ಪಾದನೆ ಕುಂಠಿತವಾಗಿದೆ. ಇದರಿಂದ, ಶಾಖೋತ್ಪನ್ನ ವಿದ್ಯುತ್‌ ಉತ್ಪಾದನೆ ಬೇಡಿಕೆ ಶೇಕಡ 12ರಿಂದ 15ರಷ್ಟು ಹೆಚ್ಚಿದೆ.

'ಪಶ್ಚಿಮ ಬಂಗಾಳದ ಕಲ್ಲಿದ್ದಲು ವಲಯ ಹಲವು ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುವವರು ಮತ್ತು ಮಾಫಿಯಾಗಳ ಹಿಡಿತದಲ್ಲಿತ್ತು. ಪಾರದರ್ಶಕತೆ ತರಲು, ಅಕ್ರಮ ಚಟುವಟಿಕೆಗಳನ್ನು ತಡೆಯಲು ಮತ್ತು ಗಣಿ ಆದಾಯ ರಾಜ್ಯದ ಬೊಕ್ಕಸಕ್ಕೆ ತಲುಪುವಂತೆ ಮಾಡಲು ಕೇಂದ್ರ ಸರ್ಕಾರ ಹಲವು ಸುಧಾರಣೆಗಳನ್ನು ತಂದಿದೆ' ಎಂದು ಹೇಳಿದರು.

'ಗಣಿಗಾರಿಕೆಗೆ ಅನುಮತಿ ಇಲ್ಲದಿದ್ದರೂ. ವಿದ್ಯುತ್‌ ಸಂಪರ್ಕ ಪಡೆದು ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿತ್ತು. ಅಪಫಾತ ನಡೆದು, ಜೀವಹಾನಿಯಾದರೂ, ಯಾರೂ ಹೊಣೆಹೊತ್ತುಕೊಳ್ಳುತ್ತಿರಲಿಲ್ಲ. ಇಂಥ 'ಜಂಗಲ್ ರಾಜ್‌' ವ್ಯವಸ್ಥೆ ಪಶ್ಚಿಮ ಬಂಗಾಳದಲ್ಲಿತ್ತು' ಎಂದು ಆರೋಪಿಸಿದರು. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries