HEALTH TIPS

ಪ್ರತಿಭಟನೆ ಭೀತಿ: ಜ್ಞಾನೇಶ್ ಕುಮಾರ್ ಮೀರಠ್, ವಾರಾಣಸಿ ಕಾರ್ಯಕ್ರಮ ಮುಂದೂಡಿಕೆ

ನವದೆಹಲಿ: ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತ ವರದಿಗಳು ಬಹಿರಂಗಗೊಂಡ ಬೆನ್ನಲ್ಲೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಮೀರಠ್ ಮತ್ತು ವಾರಾಣಸಿಯಲ್ಲಿ ಭಾಗವಹಿಸಬೇಕಿದ್ದ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.


ಜ್ಞಾನೇಶ್ ಕುಮಾರ್ ಅವರು ಇಂದು (ಶುಕ್ರವಾರ) ಮೀರಠ್ ವಿಶ್ವವಿದ್ಯಾಲಯದಲ್ಲಿ ಜೆನ್ ಝೀ ವಿದ್ಯಾರ್ಥಿಗಳೊಂದಿಗೆ ಹಾಗೂ ಭಾನುವಾರ ವಾರಾಣಸಿಯಲ್ಲಿ ಯುವಜನರೊಂದಿಗೆ ಸಂವಾದ ನಡೆಸಲಿದ್ದರು. 

ಆದರೆ, ಈ ಕಾರ್ಯಕ್ರಮಗಳ ಮುಂದೂಡುವಿಕೆಗೂ ಎಸ್‌ಐಆರ್ ವಿವಾದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಕಾರ್ಯಕ್ರಮಗಳ ದಿನಾಂಕಗಳಲ್ಲಿ ಬದಲಾವಣೆ ಆಗುವುದು ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿದ್ದು, ಉನ್ನತಾಧಿಕಾರಿಗಳ ವೇಳಾಪಟ್ಟಿ ಹಾಗೂ ಸ್ಥಳಗಳ ಲಭ್ಯತೆ ಸೇರಿದಂತೆ ವಿವಿಧ ಕಾರಣಗಳಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಯೋಗ ಹೇಳಿದೆ.

ಜ್ಞಾನೇಶ್ ಕುಮಾರ್ ಅವರ ಭೇಟಿಯ ಸಂದರ್ಭದಲ್ಲಿ ಪ್ರತಿಪಕ್ಷಗಳಿಂದ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇರುವುದರಿಂದ ಕಾರ್ಯಕ್ರಮಗಳನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯವಾಗಿ ತೆಗೆದುಕೊಂಡ ನಿರ್ಧಾರಗಳು ಮತ್ತು ಹೊರಡಿಸಿದ ಆದೇಶಗಳಿಗೆ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ಪದೇಪದೇ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಬೆಳವಣಿಗೆಗಳ ನಡುವೆಯೇ, ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ. ರಾಜೀನಾಮೆ ನೀಡದಿದ್ದರೆ ಈ ವಿಚಾರವಾಗಿ 'ಜಂತರ್ ಮಂತರ್ 2.0' ಚಳವಳಿ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಎಚ್ಚರಿಕೆ ನೀಡಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries