ಬದಿಯಡ್ಕ: ಮೊಬೈಲ್ ಫೆÇೀನ್‍ನಲ್ಲಿ ಮಕ್ಕಳ ಅಶ್ಲೀಲ ದೃಶ್ಯಗಳ ವೀಕ್ಷಣೆ ಹಾಗೂ ಇದನ್ನು ಸಂಗ್ರಹಿಸಿ ಇತರರಿಗೆ ರವಾನಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ಬದಿಯಡ್ಕ ಠಾಣೆ ಪೆÇಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಪರೇಷನ್ ಪಿ ಹಂಟ್ ಅನ್ವಯ ಪುತ್ತಿಗೆ ಉಜಾರುಪದವಿನಲ್ಲಿ ಪೆÇಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 28ರ ಹರೆಯದ ಯುವಕ ಹಾಗೂ ಕಣ್ಣೂರು ಪೇಟೆಯಲ್ಲಿ ನಡೆಸಿದ ಇನ್ನೊಂದು ಕಾರ್ಯಾಚರಣೆಯಲ್ಲಿ 44ರ ಹರೆಯದ ಯುವಕನ ವಿರುದ್ಧ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾತ್ರವಲ್ಲ ಈ ಇಬ್ಬರ ಮೊಬೈಲ್ ಪೋನ್ ಗಳನ್ನು ಪೋಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಮೊಬೈಲ್‍ಗಳಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳ ವೀಕಷಣೆ ಹಾಗೂ ಇತರರಿಗೆ ರವಾನಿಸುತ್ತಿರುವ ಪ್ರಕರಣ ಹೆಚ್ಚುತ್ತಿರುವುದನ್ನು ಪೊಲೀಸ್ ಇಲಾಖೆ ಗಂಭೀರವಾಗೊಇ ಪರಿಗಣಿಸಿ ಈ ಕಾರ್ಯಾಚರಣೆ ಆರಂಭಿಸಿದೆ.

