HEALTH TIPS

ದೇವರ ವನ ಸಂರಕ್ಷಣೆ, ವನಮಿತ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾಸರಗೋಡು: ಜಿಲ್ಲೆಯ ದೇವರ ವನ(ಬನ)ಗಳನ್ನು ಸಂರಕ್ಷಿಸಿ, ನಿರ್ವಹಣೆ ಮಾಡುತ್ತಿರುವವರಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಧನಸಹಾಯ ನೀಡಲು ರಾಜ್ಯ ಅರಣ್ಯ ಮತ್ತು ವನ್ಯಜೀವಿ ಇಲಾಖೆ ಅರ್ಜಿ ಆಹ್ವಾನಿಸಿದೆ.

ಬೇಸಿಗೆ ಕಾಲದಲ್ಲಿ ದೇವಕಾಡುಗಳ ಪ್ರದೇಶಗಳಲ್ಲಿನ ಒಣಗಿದ ಗಿಡಗಂಟಿಗಳನ್ನು ತೆರವುಗೊಳಿಸಿ ಕಾಡ್ಗಿಚ್ಚು ಹರಡುವುದನ್ನು ತಡೆಯುವ ಉದ್ದೇಶದಿಂದ ಬನಗಳ ಸಂರಕ್ಷಕರಿಗೆ ಅಥವಾ ದೇವಕಾಡುಗಳ ಹಕ್ಕುದಾರರಿಗೆ ಧನಸಹಾಯ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್ 10ರೊಳಗೆ ಕಾಸರಗೋಡು ಸಾಮಾಜಿಕ ಅರಣ್ಯ ವಿಭಾಗ ಕಚೇರಿ ಅಥವಾ ಕಾಸರಗೋಡು ಅಥವಾ ಹೊಸದುರ್ಗ ಸಾಮಾಜಿಕ ಅರಣ್ಯ ವ್ಯಾಪ್ತಿಯ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕು. ಈ ಹಿಂದೆ ದೇವಕಾಡುಗಳ ಸಂರಕ್ಷಣೆಗೆ ಧನಸಹಾಯ ಪಡೆದಿರುವವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅರ್ಜಿ ನಮೂನೆ ಅರಣ್ಯ ಇಲಾಖೆಯ ಅಧಿಕೃತ ವೆಬ್‍ಸೈಟ್ ತಿತಿತಿ.ಜಿoಡಿesಣ.ಞeಡಿಚಿಟಚಿ.gov.iಟಿ ನಲ್ಲಿ ಲಭ್ಯವಿದ್ದು,  ಹೆಚ್ಚಿನ ಮಾಹಿತಿಗಾಗಿ ಕಾಸರಗೋಡು ಅಥವಾ ಹೊಸದುರ್ಗ ಸಾಮಾಜಿಕ ಅರಣ್ಯ ವ್ಯಾಪ್ತಿಯ ಕಚೇರಿಗಳನ್ನು ಸಂಪರ್ಕಿಸಬಹುದು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ (8547603836, 8547603838)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

ವನಮಿತ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ: 

ಅರಣ್ಯ ಬೆಳೆಸುವಿಕೆ,  ವನ್ಯಜೀವಿ, ಪರಿಸರ ಹಾಗೂ ಜೀವವೈವಿಧ್ಯ ಸಂರಕ್ಷಣೆ ಮತ್ತು ನಿರ್ವಹಣೆ ಕ್ಷೇತ್ರಗಳಲ್ಲಿ ಗಮನಾರ್ಹ ಕಾರ್ಯನಿರ್ವಹಿಸುತ್ತಿರುವವರನ್ನು ಗೌರವಿಸಲು ಕೇರಳ ಅರಣ್ಯ ಮತ್ತು ವನ್ಯಜೀವಿ ಇಲಾಖೆ ನೀಡುವ ವನಮಿತ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಯು ರೂ.25,000 ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

ದೇವ ಕಾಡುಗಳ ಸಂರಕ್ಷಣೆ, ಔಷಧೀಯ ಸಸ್ಯಗಳ ರಕ್ಷಣೆ, ಜೀವವೈವಿಧ್ಯ ಸಂರಕ್ಷಣೆ ಹಾಗೂ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿರುವ ವ್ಯಕ್ತಿಗಳು, ರೈತರು, ಶಿಕ್ಷಣ ಸಂಸ್ಥೆಗಳು ಮತ್ತು ಸ್ವಯಂಸೇವಾ ಸಂಘಟನೆಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ಕಾರ್ಯಚಟುವಟಿಕೆಗಳ ಸಂಪೂರ್ಣ ವಿವರ, ಛಾಯಾಚಿತ್ರಗಳು ಹಾಗೂ ಸಂಬಂಧಿತ ದಾಖಲೆಗಳನ್ನು ಒಳಗೊಂಡ ಅರ್ಜಿಯನ್ನು  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ, ಸಾಮಾಜಿಕ ಅರಣ್ಯ ವಿಭಾಗ, ಕಾಸರಗೋಡು ಇವರಿಗೆ ಸೆಪ್ಟೆಂಬರ್ 10ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 8547603836, 8547603838 ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries