ಪೆರ್ಲ: ಶೇಣಿ ಶ್ರೀ ಶಾರದಾಂಬ ಎಯುಪಿ ಶಾಲೆಯಲ್ಲಿ 2026-27ನೇ ಸಾಲಿನ ವಿಶೇಷ ಸಮೃದ್ಧಿ ಶಿಕ್ಷಣ ಕಾರ್ಯಕ್ರಮದ ಉದ್ಘಾಟನೆ ಶುಕ್ರವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.
ಎಣ್ಮಕಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಕುಸುಮಾವತಿ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯ ಹಾಗೂ ಎಣ್ಮಕಜೆ ಗ್ರಾಮ ಪಂಚಾಯತಿ ಕ್ಷೇಮ ಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಜೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಎಣ್ಮಕಜೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಅಬೂಬಕರ್ ಸಿದ್ದೀಕ್ ವಳಮೊಗರ್, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಅಶೋಕ ಎಂ., ಕಾಸರಗೋಡು ಡಯಟ್ ಉಪನ್ಯಾಸಕ ಡಾ. ಸಿದ್ದೀಕ್ ಅಸ್ಲಂ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪಕಿ ಶಾರದಾ ವೈ., ಶಿಕ್ಷಕ ಹಾಗೂ ಎಣ್ಮಕಜೆ ಗ್ರಾಮ ಪಂಚಾಯತಿ ಸದಸ್ಯ ಶರತ್‍ಚಂದ್ರ ಶೆಟ್ಟಿ ಎಂ.ಎಸ್., ಎಸ್‍ಎಸ್‍ಎಯುಪಿಎಸ್ ಪಿಟಿಎ ಅಧ್ಯಕ್ಷ ಅಬೂಬಕರ್ ಹಾಜಿ ಪೆರ್ದನೆ, ಪಿಟಿಎ ಉಪಾಧ್ಯಕ್ಷ ಮಹೇಶ್ ಪುಣಿಯೂರು, ಎಂ.ಪಿ.ಟಿ.ಎ ಅಧ್ಯಕ್ಷೆ ಪ್ರಸನ್ನ ಕುಮಾರಿ, ಹೈಯರ್ ಸೆಕೆಂಡರಿ ಶಾಲಾ ಪ್ರಾಂಶುಪಾಲ ಶಾಸ್ತ ಕುಮಾರ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಮಾದಕ ವಸ್ತುಗಳ ವಿರುದ್ಧ ಜಾಗೃತಿ ತರಗತಿ ನಡೆಯಿತು. ಬದಿಯಡ್ಕ ಸಿವಿಲ್ ಎಕ್ಸೈಸ್ ಅಧಿಕಾರಿ ಜನಾರ್ಧನ ಎನ್. ಅವರು ತರಗತಿಯನ್ನು ನಡೆಸಿ, ಮಾದಕ ವಸ್ತುಗಳ ದುಷ್ಪರಿಣಾಮಗಳು, ವಿದ್ಯಾರ್ಥಿಗಳು ಅವುಗಳಿಂದ ದೂರವಿರುವ ಅಗತ್ಯ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಮಾಹಿತಿ ನೀಡಿದರು. ಶಾಲಾ ಸಿಬ್ಬಂದಿ ಕಾರ್ಯದರ್ಶಿ ಸುರೇಖಾ ಕೆ.ಎನ್. ಸ್ವಾಗತಿಸಿ' ಶಾಲಾ ಶಿಕ್ಷಕಿ ಖದೀಜತ್ ತಸ್ಲಿ ವಂದಿಸಿದರು. ಶ್ರೀಧರ್ ಮಾಸ್ತರ್ ಕುಕ್ಕಿಲ ನಿರೂಪಿಸಿದರು.

.jpg)
.jpg)
