HEALTH TIPS

ರಾಮಮಂದಿರ ಕಾಣಿಕೆ ಕನ್ನ: ದೋಷಾರೋಪ ಪಟ್ಟಿಯಲ್ಲಿ ಇಲ್ಲ ಚಂಪತ್ ರಾಯ್‌ ಹೆಸರು

ಲಖನೌ: ಅಯೋಧ್ಯೆಯ ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಜಾಬಾದ್‌ನ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯಕ್ಕೆ ಬುಧವಾರ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಲಾಯಿತು. ಆದರೆ, ‌ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಹೆಸರು ಚಾರ್ಜ್‌ಶೀಟ್‌ನಲ್ಲಿ ಇಲ್ಲದಿರುವುದು ವಿವಾದಕ್ಕೆ ಕಾರಣವಾಗಿದೆ. 


ವರದಿಗಳ ಪ್ರಕಾರ, 7 ಸಾವಿರಕ್ಕೂ ಹೆಚ್ಚು ಪುಟಗಳನ್ನು ಒಳಗೊಂಡಿರುವ ದೋಷಾರೋಪ ಪಟ್ಟಿಯಲ್ಲಿ ಎಂಟು ಮಂದಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ತನಿಖಾಧಿಕಾರಿ (ಐಒ) ದೊಡ್ಡ ಬ್ಯಾಗ್‌ಗಳಲ್ಲಿ ದಾಖಲೆಗಳನ್ನು ಹೊತ್ತು ನ್ಯಾಯಾಲಯಕ್ಕೆ ಹಾಜರಾಗಿದ್ದು, ಅವುಗಳಲ್ಲಿ ಬ್ಯಾಂಕ್ ಖಾತೆಗಳ ವಿವರಗಳು, ಠೇವಣಿ ರಸೀದಿಗಳು ಸೇರಿದಂತೆ ವಿವಿಧ ದಾಖಲೆಗಳು ಸೇರಿದ್ದವು ಎನ್ನಲಾಗಿದೆ.

ದೋಷಾರೋಪ ಪಟ್ಟಿ ಸಲ್ಲಿಕೆಯಾದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ವಕೀಲರು ನ್ಯಾಯಾಲಯ ಆವರಣದಲ್ಲಿ ಪ್ರತಿಭಟನೆ ಆರಂಭಿಸಿದರು. ನ್ಯಾಯಾಲಯವು ಚಾರ್ಜ್‌ಶೀಟ್‌ ಅನ್ನು ಪರಿಗಣನೆಗೆ ತೆಗೆದುಕೊಳ್ಳುವ ಮುನ್ನ ತಮ್ಮ ಆಕ್ಷೇಪಣೆಗಳನ್ನು ಆಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಚಂಪತ್ ರಾಯ್ ಹಾಗೂ ಟ್ರಸ್ಟ್‌ನ ಇತರ ಕೆಲ ಅಧಿಕಾರಿಗಳ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸದಿರುವುದನ್ನು ವಿರೋಧಿಸಿ ವಕೀಲರು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ ರಾಯ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸ್ಥಳೀಯ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು. ಪ್ರಕರಣದ ತನಿಖೆಯಲ್ಲಿ ಅವರ ಪಾತ್ರವನ್ನು ಪರಿಶೀಲಿಸಬೇಕೆಂದು ವಕೀಲರು ಆಗ್ರಹಿಸಿದ್ದಾರೆ. 





 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries