ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ನಾಳೆಯೊಳಗೆ (ಸೆಪ್ಟೆಂಬರ್ 26) ತಮ್ಮ ಹುದ್ದೆಗೆ ರಾಜೀನಾಮೆ ನೀಡದಿದ್ದರೆ, ಅಕ್ಟೋಬರ್ 2ರಿಂದ ದೇಶದಾದ್ಯಂತ ಪ್ರತಿಭಟನೆ ಆರಂಭಿಸುವುದಾಗಿ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಶುಕ್ರವಾರ ತಿಳಿಸಿದೆ.
ಜ್ಞಾನೇಶ್ ಕುಮಾರ್ ನಾಳೆಯೊಳಗೆ ರಾಜೀನಾಮೆ ನೀಡದಿದ್ದರೆ, ಅಕ್ಟೋಬರ್ 2ರಂದು ಮುಂಬೈನಿಂದ ಪ್ರತಿಭಟನೆಯನ್ನು ಪ್ರಾರಂಭಿಸಿ, ದೇಶದಾದ್ಯಂತ ವಿವಿಧ ನಗರಗಳಿಗೆ ವಿಸ್ತರಿಸಲಿದೆ.
ಗಾಂಧಿ ಜಯಂತಿಯಂದು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರತಿಜ್ಞೆ ಮಾಡೋಣ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಜ್ಞಾನೇಶ್ ಕುಮಾರ್ ಅವರು 48 ಗಂಟೆಗಳ ಒಳಗೆ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕು ಎಂದು ಸಿಜೆಪಿ ಗುರುವಾರವೇ ಆಗ್ರಹಿಸಿತ್ತು.

