HEALTH TIPS

ಮೀಯಪದವಿನಲ್ಲಿ 'ಕನಕಾಭಿಯಾನ' ಕಾರ್ಯಕ್ರಮ ಸಂಪನ್ನ

ಮಂಜೇಶ್ವರ: ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಅಧ್ಯಯನ ಪೀಠ ಮತ್ತು ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ 'ಕನಕ ಚಿಂತನೆ ಪ್ರಸಾರ ಮಾಲಿಕೆ'ಯ ಅಡಿಯಲ್ಲಿ ಹಮ್ಮಿಕೊಳ್ಳಲಾದ 'ಕನಕಾಭಿಯಾನ' ಕಾರ್ಯಕ್ರಮವು ಶುಕ್ರವಾರ ಮೀಯಪದವಿನಲ್ಲಿ ಯಶಸ್ವಿಯಾಗಿ ಜರಗಿತು.


ಮೀಯಪದವಿನ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆಯ ಕೇಶವಾಮೃತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 'ಕನಕದಾಸರ ಜೀವನ ಮತ್ತು ಸಾಹಿತ್ಯದ ಕುರಿತು ಉಪನ್ಯಾಸ ಹಾಗೂ ರಸಪ್ರಶ್ನೆ' ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢಶಾಲೆಯ ಪ್ರಬಂಧಕ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಉದ್ಘಾಟಿಸಿದರು. ಉನ್ನತ ಪ್ರೌಢಶಾಲೆಯ ಪ್ರಾಂಶುಪಾಲ ರಮೇಶ ಕೆ.ಎನ್. ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಕಾರ್ಯಕ್ರಮದ ಕುರಿತು ಆಶಯ ನುಡಿಗಳನ್ನಾಡಿದರು. ಮಂಗಳೂರು ವಿವಿಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧನಾರ್ಥಿ ಸಾಯಿಸುಮಾ ನಾವಡ ಕಾರಿಂಜ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಕನಕದಾಸರ ಜೀವನ ಮೌಲ್ಯಗಳು ಹಾಗೂ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಶ್ರೀ ವಿದ್ಯಾವರ್ಧಕ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಮೃದುಲಾ ಕೆ.ಯಂ. ಉಪಸ್ಥಿತರಿದ್ದರು. ಅಧ್ಯಾಪಕರಾದ ಪ್ರಭಾಕರ ಹಾಗೂ ಬ್ರಿಜೇಶ್ ಕನಕದಾಸರ ಕೀರ್ತನೆಯನ್ನು  ಸುಶ್ರಾವ್ಯವಾಗಿ ಹಾಡಿದರು.


ಉನ್ನತ ಪ್ರೌಢಶಾಲೆಯ ಅಧ್ಯಾಪಕ ಹರೀಶ ಜಿ. ಸ್ವಾಗತಿಸಿ, ಅಧ್ಯಾಪಕ ರಾಜಾರಾಮ ಪಿ. ವಂದಿಸಿದರು. ಪ್ರೌಢಶಾಲೆಯ ಅಧ್ಯಾಪಕಿ ಸುಧಾ ಕೆ.ಯಂ. ಕಾರ್ಯಕ್ರಮ ನಿರೂಪಿಸಿದರು. ಸಾಹಿತಿ ರಾಜಶ್ರೀ ಟಿ. ರೈ ಅವರು ಕಾರ್ಯಕ್ರಮ ಸಂಯೋಜಿಸಿದ್ದರು.

ಮಂಗಳೂರು ವಿವಿಯ ಕುಲಸಚಿವ ಸಂತೋಷ್ ಬಿ. ಜಗಲಸಾರ ಮತ್ತು ಕನಕದಾಸ ಸಂಶೋಧನಾ ಕೇಂದ್ರದ ಸಂಯೋಜಕರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಮೂಡಿಬಂದಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries