ನವದೆಹಲಿ: ದೇಶದಾದ್ಯಂತ ಎಲ್ಲ ಇಂಧನ ಕೇಂದ್ರಗಳಲ್ಲಿ ಪೆಟ್ರೋಲ್‌ನಲ್ಲಿನ ಎಥೆನಾಲ್ ಮಿಶ್ರಣದ ಶೇಕಡಾವಾರು ಪ್ರಮಾಣವನ್ನು ಪ್ರತಿಯೊಂದು ನಾಜಲ್ (ವಾಹನಗಳಿಗೆ ಪೆಟ್ರೋಲ್ ತುಂಬಿಸುವ ನಳಿಕೆ) ಮೇಲೆಯೂ ಕಡ್ಡಾಯವಾಗಿ, ಏಕರೂಪವಾಗಿ ಮತ್ತು ಸ್ಥಳೀಯ ಭಾಷೆಯಲ್ಲಿ ಪ್ರದರ್ಶಿಸಲು ನಿರ್ದೇಶಿಸಬೇಕು ಎಂದು ಕೋರಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
'ಅರ್ಜಿಯಲ್ಲಿ ಯಾವುದೇ ಹುರುಳಿಲ್ಲ' ಎಂದು ಹೇಳಿರುವ ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರ ಪೀಠವು, 'ಸಂಬಂಧಿಸಿದ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು' ಎಂದು ತಿಳಿಸಿದೆ.

