HEALTH TIPS

ಅಧಿಕೃತ ಭಾಷೆಯಾಗಿ ಹಿಂದಿ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಹಿಂದಿಯನ್ನು ಸುಪ್ರೀಂ ಕೋರ್ಟ್‌ನ ಅಧಿಕೃತ ಭಾಷೆಯಾಗಿ ಮಾಡುವುದನ್ನು ಪರಿಶೀಲಿಸಿ ಶಿಫಾರಸು ಮಾಡಲು ಆಯೋಗ ರಚಿಸುವಂತೆ ಕೇಂದ್ರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.  


'ಅರ್ಜಿದಾರರು ಕೋರಿರುವ ಬದಲಾವಣೆಗಳಿಗೆ ಸಾಂವಿಧಾನಿಕ ತಿದ್ದುಪಡಿಯ ಅಗತ್ಯವಿದೆ' ಎಂದು ಅಭಿಪ್ರಾಯಪಟ್ಟ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ಚಿ ಮತ್ತು ವಿ.ಮೋಹನಾ ಅವರಿದ್ದ ಪೀಠವು ಅರ್ಜಿಯನ್ನು ವಜಾಗೊಳಿಸಿತು.

'ನೀವು ಸಾಂವಿಧಾನಿಕ ತಿದ್ದುಪಡಿ ಕೇಳುತ್ತಿದ್ದೀರಿ, ನ್ಯಾಯಾಲಯವು ಅದನ್ನು ಹೇಗೆ ಮಾಡಲು ಸಾಧ್ಯ' ಎಂದು ಅರ್ಜಿದಾರರನ್ನು ಪ್ರಶ್ನಿಸಿದ ಪೀಠವು, 'ಸುಪ್ರೀಂ ಕೋರ್ಟ್‌ ಈಗಾಗಲೇ ಹಿಂದಿಯಲ್ಲಿ ವರದಿಗಳ ಸಂಕ್ಷಿಪ್ತ ವಿವರಣೆಯನ್ನು ನೀಡಲು ಆರಂಭಿಸಿದೆ. ಇದನ್ನು ಇತರೆ ಪ್ರಾದೇಶಿಕ ಭಾಷೆಗಳಿಗೂ ವಿಸ್ತರಿಸುವ ಯೋಜನೆ ಹೊಂದಿದೆ. ನಾವು ನಮ್ಮ ಸಂಸ್ಕೃತಿಯನ್ನುಉಳಿಸಿಕೊಳ್ಳುತ್ತೇವೆ, ಇತರ ಪ್ರಾದೇಶಿಕ ಭಾಷೆಗಳನ್ನೂ ಸಹ ಗೌರವಿಸುತ್ತೇವೆ' ಎಂದು ಸ್ಪಷ್ಟಪಡಿಸಿತು.

'ಭಾಷಾ ಸುಧಾರಣೆಯು ಆಡಳಿತಾತ್ಮಕ ಕ್ರಮಗಳ ಮೂಲಕ ಹಂತ ಹಂತವಾಗಿ ನಡೆಯುತ್ತದೆಯೇ ಹೊರತು, ನ್ಯಾಯಾಲಯದ ನಿರ್ದೇಶನಗಳ ಮೂಲಕವಲ್ಲ' ಎಂದೂ ನ್ಯಾಯಪೀಠ ಹೇಳಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries