HEALTH TIPS

ಗುವೇದಪಡ್ಪು ಪ್ರೇರಣಾ ಸಾರ್ವಜನಿಕ ಗ್ರಂಥಾಲಯ ವತಿಯಿಂದ ಓಣಂ ಆಚರಣೆ

ಮಂಜೇಶ್ವರ: ಕೇರಳದ ನಾದಹಬ್ಬವಾದ ಓಣಂ ಹಬ್ಬವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಗುವೇದಪಡ್ಪು ಪ್ರೇರಣಾ ಸಾರ್ವಜನಿಕ ಗ್ರಂಥಾಲಯದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಹೂವಿನ ರಂಗೋಲಿ ಹಾಗೂ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. 


ಕಾರ್ಯಕ್ರಮವನ್ನು ಸಾಮಾಜಿಕ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ ಜಮೀಲಾ ಗುವೇದಪಡ್ಪು ಉದ್ಘಾಟಿಸಿದರು. ಗ್ರಂಥಾಲಯದ ಅಧ್ಯಕ್ಷ ಜಯರಾಮ ಕೊಣಿಬೈಲ್ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಚೈತ್ರ ಟೀಚರ್, ರುಬೀನಾ ಟೀಚರ್, ಸರಸ್ವತಿ ಕೊಣಿಬೈಲ್, ಮಾಧವ ಪರಂದಳ, ರತೀಶ್ ಕಾನ, ಲಾವಣ್ಯ, ಆಶಾಲತಾ ಮೊದಲಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಜರಗಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗ್ರಂಥಾಲಯ ಕಾರ್ಯದರ್ಶಿ ಅಶೋಕ್ ಕೊಡ್ಲಮೊಗರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗ್ರಂಥಪಾಲಕಿ ಜಯಶ್ರೀ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries