HEALTH TIPS

ದೇಶದ ಈ ಭಾಗಗಳಲ್ಲಿ ಭಾರಿ ಮಳೆ: ವಿವಿಧ ರಾಜ್ಯಗಳಿಗೆ ಹೈ ಅಲರ್ಟ್‌ ಘೋಷಣೆ

ನವದೆಹಲಿ: ದೇಶದ ವಿವಿಧ ರಾಜ್ಯಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಶಾನ್ಯ ಹಾಗೂ ಉತ್ತರ ಭಾರತದ ಹಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.


ಈಶಾನ್ಯ ಮತ್ತು ಪೂರ್ವ ರಾಜ್ಯಗಳಿಗೆ ಮುನ್ನೆಚ್ಚರಿಕೆ: ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಬಿಹಾರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಲವೆಡೆ ಸಿಡಿಲು ಮತ್ತು ಬಿರುಗಾಳಿ ಸಹಿತ ಜಡಿಮಳೆ ಸುರಿಯಲಿದೆ.

ದೆಹಲಿ-ಎನ್‌ಸಿಆರ್: ಕಳೆದ ಎರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ದೆಹಲಿ ಮತ್ತು ಸುತ್ತಮುತ್ತಲಿನ (ಗುರುಗ್ರಾಮ, ನೋಯ್ಡಾ, ಫರಿದಾಬಾದ್, ಘಾಜಿಯಾಬಾದ್) ರಸ್ತೆಗಳಲ್ಲಿ ನೀರು ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ದೆಹಲಿಯಲ್ಲಿ ಭಾನುವಾರ ಮೋಡಕವಿದ ವಾತಾವರಣವಿದ್ದು ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಗುರುಗ್ರಾಮ, ಫರಿದಾಬಾದ್, ನೋಯ್ಡಾ ಮತ್ತು ಘಾಜಿಯಾಬಾದ್‌ಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಮಳೆ ಮುಂದುವರಿಯಲಿದೆ.

ಗುಡುಗು, ಸಿಡಿಲು ಮತ್ತು ಬಿರುಗಾಳಿ: ಕರ್ನಾಟಕ, ಬಿಹಾರ, ಮಧ್ಯಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿ ಹಾಗೂ ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಉತ್ತರಾಖಂಡದಲ್ಲೂ ಸಿಡಿಲು ಸಹಿತ ಮಳೆಯಾಗಲಿದೆ.

ಸೋಮವಾರವೂ ಮಳೆ ಮುಂದುವರಿಕೆ: ಸೋಮವಾರವೂ (ಸೆಪ್ಟೆಂಬರ್ 7) ದೇಶದ ಹಲವೆಡೆ ಮಳೆ ಮುಂದುವರಿಯಲಿದ್ದು, ಉತ್ತರಾಖಂಡ, ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries