ಕಾಸರಗೋಡು: ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಶೇಷ ಕಾರ್ಯದರ್ಶಿಯಾಗಿರುವ ಡಾ. ಡಿ. ಸಜಿತ್ ಬಾಬು ಅವರು ಸೆಪ್ಟೆಂಬರ್ 23 ರಂದು ಕಾಸರಗೋಡು ಜಿಲ್ಲೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
23ರಂದು ಬೆಳಿಗ್ಗೆ 9ರಿಂದ 11 ರವರೆಗೆ ಜಿಲ್ಲಾ ಚುನಾವಣಾ ಉಗ್ರಾಣದ ಪರಿಶೀಲನೆ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲನಾ ಸಭೆ, 11.05ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಮತ್ತು ಮಧ್ಯಾಹ್ನ 2.15 ಕ್ಕೆ ಶಾಲಾ ಪ್ರಾಂಶುಪಾಲರೊಂದಿಗೆ ಸಭೆ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.
C

