HEALTH TIPS

ಕೆನಡಾದಲ್ಲಿ ತರಬೇತಿ ವಿಮಾನ ಅಪಘಾತ: ಭಾರತ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು

ಟೊರೊಂಟೊ: ಕೆನಡಾದಲ್ಲಿ ಚಾಲನಾ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಭಾರತ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಭಾರತೀಯ ರಾಯಭಾರ ಕಚೇರಿ ಈ ಮಾಹಿತಿಯನ್ನು ಖಚಿತಪಡಿಸಿದೆ. 


ಮೃತರನ್ನು ತಮಿಳುನಾಡಿನ ಮನೋಜ್‌ ಶಿವಕುಮಾರ್‌ ಹಾಗೂ ಪುದುಚೇರಿಯ ಶ್ರೀಸರನ್‌ ತಿರುಜ್ಞಾನಸಂಬಂಧಂ ಎಂದು ಗುರುತಿಸಲಾಗಿದೆ. 

ವ್ಯಾಂಕೋವರ್‌ನಲ್ಲಿರುವ ರಾಯಭಾರ ಕಚೇರಿಯು ವಿದ್ಯಾರ್ಥಿಗಳ ಸಾವಿಗೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದೆ.

'ಭಾರತದ ತಮಿಳುನಾಡು ಮತ್ತು ಪುದುಚೇರಿಯ ವಿದ್ಯಾರ್ಥಿಗಳು ಕೆನಡಾದಲ್ಲಿ ವಿಮಾನ ಚಾಲನಾ ತರಬೇತಿ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ' ಎಂದು ತಿಳಿಸಿದೆ.

'ಸಂಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಆಪ್ತರಿಗೆ ಸಂತಾಪ ಸೂಚಿಸುತ್ತೇವೆ. ಮೃತದೇಹಗಳನ್ನು ಭಾರತಕ್ಕೆ ಕಳುಹಿಸಲು ಅಗತ್ಯ ನೆರವು ನೀಡಲು ರಾಯಭಾರ ಕಚೇರಿ ಸಿದ್ಧವಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ಬರೆದುಕೊಂಡಿದೆ.


The Consulate General of India, Vancouver, expresses its deepest condolences on the tragic demise of Shri Manoj Sivakumar and Shri Srisaran Thirugnanasambantham, two Indian students from Tamil Nadu and Puducherry, who lost their lives in a tragic air accident in Canada during Show more

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries