HEALTH TIPS

ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಬದಿಯಡ್ಕ: ಕನ್ನೆಪ್ಪಾಡಿ ಬಳಿಯ ಪಟ್ಟಾಜೆ ನಿವಾಸಿ ಚಿನಿಯಪ್ಪ ನಾಯ್ಕ ಎಂಬವರ ಪುತ್ರ ರಂಜಿತ್ (29)ಅವರ ಮೃತದೇಹ ಮನೆ ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭ ಯುವಕ ಕೃತ್ಯವೆಸಗಿದ್ದಾನೆ.

ಬುಧವಾರ ಬೆಳಿಗ್ಗೆ 8ರಿಂದ ರಾತ್ರಿ 8.30ರ ಮಧ್ಯೆ  ಘಟನೆ ನಡೆದಿದ್ದು, ಮನೆಯವರು ರಾತ್ರಿ ವಾಪಸಾದಾಗ ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಿದ ಸ್ಥಿತಿಯಲ್ಲಿತ್ತು. ಬಾಗಿಲು ಬಡಿದು ಕರೆದರೂ ತೆರೆಯದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳಪ್ರವೇಶಿಸಿ ನೋಡಿದಾಗ ರಂಜಿತ್ ಬೆಡ್‍ರೂಂನಲ್ಲಿ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.  ತಕ್ಷಣ ಇವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಿದರೂ ಪ್ರಯೋಜನವಾಗಿರಲಿಲ್ಲ.  ರಂಜಿತ್ ಅಲ್ಯುಮಿನಿಯಂ ಫ್ಯಾಬ್ರಿಕೇಶನ್ ಕೆಲಸ ನಿರ್ವಹಿಸುತ್ತಿದ್ದ. ಬದಿಯಡ್ಕ ಠಾಣೆ ಪೋಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries