ನವದೆಹಲಿ: ನಾನು ಸರಕಾರದ ವಿರುದ್ಧ ಮಾತನಾಡುತ್ತಿರುವುದರಿಂದ, ನನ್ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯ್ಯುವ ಸಾಧ್ಯತೆ ಇದೆ ಎಂದು ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಆತಂಕ ವ್ಯಕ್ತಪಡಿಸಿದರು. ಇದೇ ವೇಳೆ, ಕಳೆದ ವರ್ಷದ ಸೆಪ್ಟೆಂಬರ್ 24ರಂದು ಲಡಾಖ್ ನಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿರುವ ಬಗ್ಗೆ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ಸಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.
ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿದ್ದ ಪ್ರಕರಣದಲ್ಲಿ, ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಆಧಾರದ ಮೇಲೆ ಮ್ಯಾಜಿಸ್ಟೀರಿಯಲ್ ನ್ಯಾಯಾಲಯವು ಆಗಸ್ಟ್ 3ರಂದು ಮಾಜಿ ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷರನ್ನು ದೋಷಮುಕ್ತಗೊಳಿಸಿತ್ತು. ಅಲ್ಲದೆ, ಡಬ್ಲ್ಯುಎಫ್‌ಐನ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನೂ ಖುಲಾಸೆಗೊಳಿಸಿತ್ತು.
'ಈ ಆದೇಶವು ದೋಷಪೂರಿತವಾಗಿದ್ದು, ಕಾನೂನಿನಡಿಯಲ್ಲಿ ಇದು ಸಮರ್ಥನೀಯವಲ್ಲ' ಎಂದು ಶುಕ್ರವಾರ ಸಲ್ಲಿಕೆಯಾದ ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಧೀಶ ದಿಗ್ವಿನಯ್ ಸಿಂಗ್ ಅವರು ಶನಿವಾರ ನಡೆಸುವ ಸಾಧ್ಯತೆಯಿದೆ.
ಇದಕ್ಕೂ ಮುನ್ನ, ಮ್ಯಾಜಿಸ್ಟೀರಿಯಲ್ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ, ದೂರು ನೀಡಿದ್ದ ಐವರು ಕುಸ್ತಿಪಟುಗಳ ಪೈಕಿ ಇಬ್ಬರು, ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸುವಂತೆ ತಮ್ಮ ಮೇಲೆ ಒತ್ತಡ ಹೇರಲಾಗಿತ್ತು ಎಂದು ತಿಳಿಸಿರುವುದನ್ನು ಉಲ್ಲೇಖಿಸಲಾಗಿತ್ತು.

