HEALTH TIPS

ಗಡಿನಾಡಿನ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪ್ರಾಧಿಕಾರ ಸದಾ ಬದ್ಧ: ಸೋಮಣ್ಣ ಬೇವಿನಮರದ

ಮಂಜೇಶ್ವರ: ಗಡಿ ಭಾಗಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕøತಿಯನ್ನು ಉಳಿಸಿ ಬೆಳೆಸುವಲ್ಲಿ ಕನ್ನಡ ಶಾಲೆಗಳ ಪಾತ್ರ ಮಹತ್ತರವಾಗಿದ್ದು, ಗಡಿನಾಡ ಶಾಲೆಗಳನ್ನು ತಂತ್ರಜ್ಞಾನದೊಂದಿಗೆ ಸಬಲೀಕರಣಗೊಳಿಸಲು ಸರ್ಕಾರ ಹಾಗೂ ಪ್ರಾಧಿಕಾರ ಸದಾ ಬದ್ಧವಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ  ಸೋಮಣ್ಣ ಬೇವಿನಮರದ ತಿಳಿಸಿದರು.


ಮೀಂಜ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೀಯಪದವಿನ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಢ ಶಾಲೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೀಡಿದ 'ಸ್ಮಾರ್ಟ್ ಬೋರ್ಡ್ ಪ್ಯಾನೆಲ್' ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಬಂಧಕ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೀಂಜ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎ. ತಾಜುದ್ದೀನ್ ಹಾಗೂ ಪಂಚಾಯತಿ ಸದಸ್ಯ ಸಿದ್ದೀಕ್ ಕೆ.ಎಂ. ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಪ್ರಾಧಿಕಾರದ ಸದಸ್ಯರಾದ  ಶಿವರೆಡ್ಡಿ ಖ್ಯಾಡೇದ, ಎ.ಆರ್. ಸುಬ್ಬಯ್ಯಕಟ್ಟೆ, ನಿವೃತ್ತ ಅಧ್ಯಾಪಕ ದಾಮೋದರ ಮಾಸ್ತರ್, ಹಿರಿಯ ಗಮಕ ಕಲಾವಿದ ತೆಕ್ಕೇಕೆರೆ ಶಂಕರನಾರಾಯಣ ಭಟ್, ಶಾಲಾ ಪ್ರಾಂಶುಪಾಲ ರಮೇಶ್ ಕೆ.ಎನ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಹಮೀದ್ ಮೈತಾಳ್ ಮತ್ತಿತರರು ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮುಖ್ಯೋಪಾಧ್ಯಾಯಿನಿ ಮೃದುಲ ಕೆ.ಎಂ. ಸ್ವಾಗತಿಸಿ, ಅಧ್ಯಾಪಕ ಲಕ್ಷ್ಮೀಶ. ಬಿ ವಂದಿಸಿದರು. ಕಿರಣ್. ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries