ಬೀಜಿಂಗ್ (PTI): 'ಚೀನಾ ಸದರ್ನ್ ಏರ್‌ಲೈನ್ಸ್' ಸಂಸ್ಥೆಯು ಗುವಾಂಗ್‌ಝೌ- ದೆಹಲಿ ನಡುವಿನ ವಿಮಾನ ಸಂಚಾರವನ್ನು ಸೆಪ್ಟೆಂಬರ್ 21ರಿಂದ ಪುನರಾರಂಭಿಸುವುದಾಗಿ ಘೋಷಿಸಿದೆ. ಆರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಂಸ್ಥೆಯು ವಿಮಾನ ಸಂಚಾರ ಆರಂಭಿಸಲಿದೆ.
ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಲು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಭಾರತಕ್ಕೆ ಭೇಟಿ ನೀಡಿರುವ ಸಮಯದಲ್ಲೇ ಈ ಬೆಳವಣಿಗೆ ನಡೆದಿದೆ.
2020ರಲ್ಲಿ ಕೋವಿಡ್ ಸಮಯದಲ್ಲಿ ಚೀನಾ ಮತ್ತು ಭಾರತದ ನಡುವಿನ ನೇರ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು.
ಇಂಡಿಗೊ ಸಂಸ್ಥೆಯು ಈ ವರ್ಷದ ಮಾರ್ಚ್‌ನಲ್ಲಿ ಕೋಲ್ಕತ್ತ- ಗುವಾಂಗ್‌ಝೌ ನಡುವೆ ವಿಮಾನ ಸಂಚಾರ ಆರಂಭಿಸಿತ್ತು.

