ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ)ನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ ನಾಲ್ವರು ಮಹಿಳಾ ಕುಸ್ತಿ ಪಟುಗಳು ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ದಿಲ್ಲಿ ನ್ಯಾಯಾಲಯ ಸೋಮವಾರ ನೋಟಿಸು ಜಾರಿ ಮಾಡಿದೆ.
ಸೆಪ್ಟಂಬರ್ 25ರಂದು ಸಲ್ಲಿಸಲಾದ ಈ ಕ್ರಿಮಿನಲ್ ಮೇಲ್ಮನವಿಯಲ್ಲಿ, ಪ್ರಕರಣದಲ್ಲಿ ಕ್ರಿಮಿನಲ್ ಬೆದರಿಕೆ ಆರೋಪದಿಂದ ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್‌ನನ್ನು ದೋಷಮುಕ್ತಗೊಳಿಸಿರುವುದನ್ನೂ ಪ್ರಶ್ನಿಸಲಾಗಿದೆ.
ವಿಶೇಷ ನ್ಯಾಯಾಧೀಶ ದಿಗ್‌ವಿಜಯ್ ಸಿಂಗ್ ಅವರು ಸಿಂಗ್, ತೋಮರ್ ಮತ್ತು ರಾಜ್ಯ ಸರಕಾರಕ್ಕೆ ನೋಟಿಸು ಜಾರಿ ಮಾಡಿದ್ದಾರೆ.
ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಲಾಗಿದೆ.

