HEALTH TIPS

ಬ್ರಿಕ್ಸ್‌ ಶೃಂಗಸಭೆ: ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಮೂರು ದಿನಗಳ ಭಾರತ ಪ್ರವಾಸದ ಭಾಗವಾಗಿ ಶುಕ್ರವಾರ ದೆಹಲಿಗೆ ಬಂದಿಳಿದಿದ್ದಾರೆ. ಪುಟಿನ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗವೂ ಬಂದಿದೆ. 


ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲಿರುವ ಪುಟಿನ್, ದ್ವಿಪಕ್ಷೀಯ ವ್ಯಾಪಾರ, ಹೂಡಿಕೆ ಮತ್ತು ಇಂಧನ ಸಹಕಾರವನ್ನು ವಿಸ್ತರಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ.

18ನೇ ಬ್ರಿಕ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ರಷ್ಯಾದ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದೇವೆ. ಭಾರತ ಮತ್ತು ರಷ್ಯಾ ವಿಶೇಷ ಪಾಲುದಾರಿಕೆಯಲ್ಲಿ ಸುದೀರ್ಘ ಬಾಂಧವ್ಯವನ್ನು ಹೊಂದಿವೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

2022ರ ಫೆಬ್ರುವರಿಯಲ್ಲಿ ಉಕ್ರೇನ್ ವಿರುದ್ಧ ಯುದ್ಧ ಆರಂಭವಾದ ಬಳಿಕ ರಷ್ಯಾದ ಹೊರಗಿನ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪುಟಿನ್ ಅವರು ನೇರವಾಗಿ ಭಾಗವಹಿಸುತ್ತಿರುವುದು ಇದೇ ಮೊದಲು.

ಭಾರತ ಆತಿಥ್ಯ ವಹಿಸಿರುವ 18ನೇ 'ಬ್ರಿಕ್ಸ್‌' ಶೃಂಗಸಭೆಯು ದೆಹಲಿಯ 'ಭಾರತ ಮಂಟಪ'ದಲ್ಲಿ ಸೆಪ್ಟೆಂಬರ್‌ 12 ಮತ್ತು 13ರಂದು ನಡೆಯಲಿದೆ. ಸಭೆಯಲ್ಲಿ ಆಹಾರ, ಇಂಧನ, ಆರೋಗ್ಯ, ಪೂರೈಕೆ ಸರಪಳಿಗಳಲ್ಲಿ ಸಾಮೂಹಿಕ ನಾಯಕತ್ವವನ್ನು ಹೆಚ್ಚಿಸುವುದರ ಮೇಲೆ ಗಮನ ಹರಿಸುವ ನಿರೀಕ್ಷೆಯಿದೆ.

ಪಶ್ಚಿಮ ಏಷ್ಯಾ ಸಂಘರ್ಷ, ಹೊರ್ಮುಜ್‌ ಜಲಸಂಧಿ ಬಿಕ್ಕಟ್ಟು, ರಷ್ಯಾ-ಉಕ್ರೇನ್‌ ಯುದ್ಧದ ಪರಿಣಾಮದಿಂದ ಉಂಟಾಗಿರುವ ಆರ್ಥಿಕ ಅಸ್ಥಿರತೆ ಮತ್ತು ಜಾಗತಿಕ ಸವಾಲುಗಳ ಕುರಿತ ಚರ್ಚೆಗೆ ಈ ಬಾರಿಯ ಸಮ್ಮೇಳನ ನಿರ್ಣಾಯಕ ವೇದಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌, ಇರಾನ್ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯಾನ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ, ಇಂಡೊನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ, ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ, ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಸೇರಿ 'ಬ್ರಿಕ್ಸ್‌' ಒಕ್ಕೂಟದ 11 ಸದಸ್ಯ ರಾಷ್ಟ್ರಗಳ ಹಲವು ನಾಯಕರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಪುಟಿನ್ ಮತ್ತು ಮೋದಿ ಅವರು ಶುಕ್ರವಾರ ಮಧ್ಯಾಹ್ನ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಸಭೆಯಲ್ಲಿ ರಕ್ಷಣೆ, ಇಂಧನ, ತಂತ್ರಜ್ಞಾನ, ವೈದ್ಯಕೀಯ ಕ್ಷೇತ್ರ, ಜನರ ನಡುವಿನ ಪರಸ್ಪರ ಸಂಪರ್ಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸುವತ್ತ ಗಮನ ಹರಿಸುವ ನಿರೀಕ್ಷೆಯಿದೆ. 


Warmly welcome President Vladimir Putin of Russia for the 18th BRICS Summit. He was received by MoS @KVSinghMPGonda at the airport. India and Russia share multifaceted and longstanding ties anchored in Special and Privileged Strategic Partnership. #BRICS2026 #BRICSIndia2026 Show more







 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries