HEALTH TIPS

ಸೇವಾ ಸಂಕಲ್ಪ ಅಭಿಯಾನ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳಿಗಾಗಿ ಜಿಲ್ಲಾ ಕಾರ್ಯಾಗಾರ

ಕಾಸರಗೋಡು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನಸೇವೆಯ ಹಾದಿಯಲ್ಲಿ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಆಯೋಜಿಸಲಾಗುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ, ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮತ್ತು ಮಂಡಲ ಉಪ ಸಮಿತಿ ಸದಸ್ಯರಿಗಾಗಿ  ಕಾರ್ಯಾಗಾರ ಬಿಜೆಪಿ ಜಿಲ್ಲಾ ಕಚೇರಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಆಯೋಜಿಸಲಾಯಿತು. 


ಬಿಜೆಪಿ ಕಣ್ಣೂರು ವಲಯ ಪ್ರಭಾರಿ ಹಾಗೂ ಬಿಜೆಪಿ ರಾಜ್ಯ ಸೆಲ್ ಸಂಯೋಜಕ, ವಕೀಲ ವಿ.ಕೆ. ಸಜೀವನ್ ಕಾರ್ಯಾಗಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, 2026 - 27 ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತವು ಸಾಧಿಸಿದ 7.8% ಆಂತರಿಕ ಬೆಳವಣಿಗೆಯು ನರೇಂದ್ರ ಮೋದಿ ಸರ್ಕಾರ ಸರಿಯಾದ ದಿಕ್ಕಿನಲ್ಲಿದೆ ಎಂಬುದನ್ನು ನಿಸ್ಸಂದೇಹವಾಗಿ ಸಾಬೀತುಪಡಿಸಿದೆ. ಸೇವಾ ಸಂಕಲ್ಪ ಅಭಿಯಾನವು ಬಿಜೆಪಿ ಅಥವಾ ನರೇಂದ್ರ ಮೋದಿಯವರ ರಾಜಕೀಯ ಪ್ರಚಾರ ಕಾರ್ಯಕ್ರಮವಲ್ಲ, ಬದಲಾಗಿ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಯೋಜನಗಳು ತಲುಪುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳುವ ಒಂದು ಅವಕಾಶವಾಗಿದೆ ಎಂದು ವಿ.ಕೆ. ಸಜೀವನ್ ತಿಳಿಸಿದರು.

ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದ್ದರು.

ಕಣ್ಣೂರು ವಲಯ ಸಂಘಟನಾ ಕಾರ್ಯದರ್ಶಿ ಎ.ವಿ. ಶಿಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಎನ್. ಬಾಬುರಾಜ್, ಮನುಲಾಲ್ ಮೇಲತ್, ಹಿರಿಯ ಮುಖಂಡರಾದ ಎಂ. ಸಂಜೀವ ಶೆಟ್ಟಿ, ವಿ. ರವೀಂದ್ರನ್, ವಕೀಲ ಬಾಲಕೃಷ್ಣ ಶೆಟ್ಟಿ, ಸತೀಶ್ಚಂದ್ರ ಭಂಡಾರಿ, ಸವಿತಾ ಟೀಚರ್, ಎ. ವೇಲಾಯುಧನ್, ರಾಮಪ್ಪ ಮಂಜೇಶ್ವರ, ಸುಧಾಮ ಗೋಸಾಡ ಮೊದಲಾದವರು ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries