HEALTH TIPS

ನಾಲಂದ ಕಾಲೇಜಿನಲ್ಲಿ ಮೇಜರ್ ಧ್ಯಾನ್ ಚಂದ್ ಅವರ ಕೊಡುಗೆಗಳ ಕುರಿತು ಉಪನ್ಯಾಸ

ಪೆರ್ಲ: ನಾಲಂದ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಎನ್.ಎಸ್.ಎಸ್. ಹಾಗೂ ಐಕ್ಯುಎಸಿ ಸಹಯೋಗದಲ್ಲಿ ಭಾರತದ ಖ್ಯಾತ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಕೊಡುಗೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.


ಕಾಲೇಜಿನ ಪ್ರಾಂಶುಪಾಲ ಡಾ. ಎ. ಮೋಹನ ಕುಂಟಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಪ್ರಾಂಶುಪಾಲ ಪ್ರೊ. ಪಿ. ಎನ್. ಮೂಡಿತ್ತಾಯ ಅವರು ಭಾಗವಹಿಸಿ, ಭಾರತೀಯ ಹಾಕಿ ಕ್ರೀಡೆಯ ಬೆಳವಣಿಗೆಯಲ್ಲಿ ಮೇಜರ್ ಧ್ಯಾನ್ ಚಂದ್ ಅವರ ಅಪಾರ ಕೊಡುಗೆ, ಸಾಧನೆಗಳು ಹಾಗೂ ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿದ ಪ್ರೇರಣೆಯ ಕುರಿತು ವಿವರಿಸಿದರು. ಯುವಜನರು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು, ಶಿಸ್ತು, ಪರಿಶ್ರಮ ಮತ್ತು ಸಮರ್ಪಣಾ ಮನೋಭಾವವನ್ನು ರೂಢಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಓSS ಸ್ವಯಂಸೇವಕ ಪುನೀತ್ ಸ್ವಾಗತಿಸಿ, . ಸ್ವಯಂಸೇವಕಿ ಭವ್ಯಶ್ರೀ ವಂದಿಸಿದರು. ಸ್ವಯಂಸೇವಕಿ ಆಯಿಷತ್ ಇಸಾನಾ ಕಾರ್ಯಕ್ರಮ ನಿರೂಪಿಸಿದರು.

ಕಾಲೇಜಿನ ಆಡಳಿತಮಂಡಳಿಯ ಗೌರವ ಸಲಹೆಗಾರರಾದ ಕಜಂಪಾಡಿ ಸುಬ್ರಹ್ಮಣ್ಯ ಭಟ್, ಐಕ್ಯುಎಸಿ ಸಂಯೋಜಕಿ ಕು. ಮಧುಶ್ರೀ, ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ., ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ದೇಶಭಕ್ತಿ ಹಾಗೂ ಸಾಧನೆಯತ್ತ ಪ್ರೇರಣೆಯನ್ನು ಮೂಡಿಸಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries