HEALTH TIPS

ಚುನಾವಣಾ ಪ್ರಕ್ರಿಯೆ ಆಧುನೀಕರಣಕ್ಕೆ ರಾಜ್ಯ ಚುನಾವಣಾ ಆಯೋಗ ಪರಿಗಣನೆ

ಕಾಸರಗೋಡು: ಕಾಲಕ್ಕನುಗುಣವಾಗಿ ಚುನಾವಣಾ ಪ್ರಕ್ರಿಯೆಗಳನ್ನು ಆಧುನೀಕರಿಸುವ ಕ್ರಮಗಳನ್ನು ರಾಜ್ಯ ಚುನಾವಣಾ ಆಯೋಗ ಪರಿಗಣಿಸುತ್ತಿರುವುದಾಗಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ. ಡಿ. ಸಾಜಿತ್ ಬಾಬು ಐಎಎಸ್ ತಿಳಿಸಿದ್ದಾರೆ. ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಚುನಾವಣಾ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.


ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿರುವ ಅಧಿಕಾರಿಗಳಿಗೆ ಉಪಯುಕ್ತವಾಗುವಂತಹ 'ಎಐ-ಚಾಟ್‍ಬಾಟ್' ಮತ್ತು 'ಮತಗಟ್ಟೆ ಪತ್ತೆಹಚ್ಚುವ ಆ್ಯಪ್' ಅನ್ನು ಪರಿಚಯಿಸಲು ಹಾಗೂ ಜಿಲ್ಲಾ ಚುನಾವಣಾ ನಿರ್ವಹಣಾ ಯೋಜನೆಯನ್ನು ಆನ್‍ಲೈನ್‍ನಲ್ಲಿ ಲಭ್ಯವಾಗುವಂತೆ ಮಾಡಲು ಕೇರಳದಲ್ಲಿ ಇದೇ ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲಾ ಮತಗಟ್ಟೆಗಳನ್ನು ಸರ್ಕಾರದ ನಿಯಂತ್ರಣದಲ್ಲಿರುವ ಕಟ್ಟಡಗಳಿಗೆ ಸ್ಥಳಾಂತರಿಸುವ ಪ್ರಸ್ತಾವನೆ ಪರಿಗಣನೆಯಲ್ಲಿದ್ದು, ಶಾಲೆಗಳಲ್ಲಿರುವ ಎಲ್ಲಾ ಮತಗಟ್ಟೆಗಳಲ್ಲಿ ಫ್ಯಾನ್, ಬೆಳಕು ಮತ್ತು ಕುಡಿಯುವ ನೀರಿನ ಪೂರೈಕೆ ಜತೆಗೆ ಶೌಚಗೃಹ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಿರುವ ಅರ್ಜಿಗಳನ್ನು ಮುಂದಿನ ತಿಂಗಳ 15ರೊಳಗೆ ವಿಲೇವಾರಿ ಮಾಡುವುದರ ಜತೆಗೆ ಪ್ರಸಕ್ತ ಇರುವ ದತ್ತಾಂಶವನ್ನು ತಕ್ಷಣವೇ ನವೀಕರಿಸುವಂತೆಯೂ ಜಿಲ್ಲಾಧಿಕಾರಿ ಶ್ರೀಧನ್ಯ ಸುರೇಶ್ ನಿರ್ದೇಶನ ನೀಡಿದರು.

ಎಡಿಎಂ ಪಿ. ಉದಯಕುಮಾರ್, ಚುನಾವಣಾ ಸಹಾಯಕ ಜಿಲ್ಲಾಧಿಕಾರಿ ಕೆ. ಅಜೇಶ್, ಆರ್‍ಡಿಒಗಳು,  ಸಹಾಯಕ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾ ನೋಂದಣಿ ಅಧಿಕಾರಿಗಳು ಉಪಸ್ಥಿತರಿದ್ದರು.  ಕಾಸರಗೋಡು ಜಿಲ್ಲಾಡಳಿತದ ಚುನಾವಣಾ ವಿಭಾಗದ ಭಾಗವಾಗಿರುವ ಚುನಾವಣಾ ಸಾಮಗ್ರಿ ಸಂಗ್ರಹಣಾ ಮಳಿಗೆಗೂ (ವೇರ್‍ಹೌಸ್) ಮುಖ್ಯ ಚುನಾವಣಾಧಿಕಾರಿ ಭೇಟಿ ನೀಡಿದರು.

ಮುಖ್ಯ ಚುನಾವಣಾಧಿಕಾರಿಯವರು ಚುನಾವಣಾ ಸಾಮಗ್ರಿ ಸಂಗ್ರಹಣಾ ಕೇಂದ್ರಕ್ಕೂ ಭೇಟಿ ನೀಡಿದರು. ಅವರೊಂದಿಗೆ ಜಿಲ್ಲಾಧಿಕಾರಿ ಶ್ರೀಧನ್ಯ ಸುರೇಶ್ (ಇವರು ಜಿಲ್ಲಾ ಚುನಾವಣಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ), ಚುನಾವಣಾ ಸಹಾಯಕ ಜಿಲ್ಲಾಧಿಕಾರಿ ಕೆ. ಅಜೇಶ್ ಮತ್ತು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ) ಪಿ. ಉದಯಕುಮಾರ್ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries